ಶಿವಮೊಗ್ಗ: ಶಿವಮೊಗ್ಗದ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ಭಾನುವಾರ ರಾತ್ರಿ ಧ್ವಂಸಗೊಳಿಸಿದ್ದಾರೆ.
ಹೊಳೆಹೊನ್ನೂರು ಗ್ರಾಮದ ಮುಖ್ಯ ಜಂಕ್ಷನ್ ನಲ್ಲಿ 18 ವರ್ಷಗಳ ಹಿಂದೆ ಗಾಂಧಿ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿತ್ತು. ಗಾಂಧಿ ಪ್ರತಿಮೆಯನ್ನು ಭಾನುವಾರ ರಾತ್ರಿ ಧ್ವಂಸ ಮಾಡಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದು, ಹಲವರಿಂದ ಹೇಳಿಕೆ ಪಡೆದುಕೊಂಡಿದ್ದಾರೆ. ಸದ್ಯಕ್ಕೆ ಯಾರನ್ನೂ ಬಂಧಿಸಿಲ್ಲ.