ಇಂದು ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ರಣಕಹಳೆ

ಶಿವಮೊಗ್ಗ: ಎರಡು ದಿನಗಳ ಹಿಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರು ಕಲಬುರಗಿಯಲ್ಲಿ ರಣಕಹಳೆ ಮೊಳಗಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಇಂದು(ಮಾ.18) ಶಿವಮೊಗ್ಗದಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಕರುನಾಡ ಕಣವನ್ನು ರಂಗೇರಿಸಲಿದ್ದಾರೆ.

ಇಂದು ಮಧ್ಯಾಹ್ನ 1.15ಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸುವ ಪ್ರಧಾನಿ ಅವರು 40 ಎಕರೆ ವಿಸ್ತೀರ್ಣವಿರುವ ನಗರದ ಅಲ್ಲಮಪ್ರಭು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗ ವಹಿಸಲಿದ್ದಾರೆ. ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಆರಗ ಜ್ಞಾನೇಂದ್ರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳು ಮೋದಿ ಜತೆ ವೇದಿಕೆ ಹಂಚಿಕೊಳ್ಳಲಿದ್ದಾರೆ.

ಮಧ್ಯ ಕರ್ನಾಟಕದ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಪ್ರಾಬಲ್ಯ ಹೊಂದಿದ್ದು, ಈ ಬಾರಿಯೂ ಗೆಲುವಿನ ನಿರೀಕ್ಷೆಯಲ್ಲಿದೆ. ನಾಲ್ಕು ಲೋಕಸಭಾ ಕ್ಷೇತ್ರದ 2 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ.

ಪ್ರತೀ ಬಾರಿ ರ್‍ಯಾಲಿ ವೇಳೆ ನೇರವಾಗಿ ವೇದಿಕೆಗೆ ಆಗಮಿಸುತ್ತಿದ್ದ ಮೋದಿ ಅವರನ್ನು ಈ ಬಾರಿ ಬೃಹತ್‌ ಪೆಂಡಾಲ್‌ನ ಮಧ್ಯಭಾಗದಿಂದ ಕರೆತರಲು ಸಿದ್ಧತೆ ಮಾಡಲಾಗಿದೆ. ವೇದಿಕೆಯ ವರೆಗೂ ಕಾರಿನಲ್ಲಿ ಬರುವ ಮೋದಿ ತೆರೆದ ವಾಹನದಲ್ಲಿ ಮಧ್ಯ ಭಾಗದಿಂದ ವೇದಿಕೆಗೆ ಆಗಮಿಸಲಿದ್ದಾರೆ. ಕಾರ್ಯಕರ್ತರು ಹತ್ತಿರದಿಂದ ಮೋದಿ ಅವರನ್ನು ನೋಡಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ.

Ashitha S

Recent Posts

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

14 mins ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

31 mins ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

43 mins ago

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

57 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಗೆ ಹಣಕಾಸಿನ ಸಮಸ್ಯೆ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 13 ಮೇ​​ 2024ರ…

1 hour ago

96 ಲೋಕಸಭಾ ಕ್ಷೇತ್ರಗಳಲ್ಲಿ ಇಂದು 4ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ (4ನೇ ಹಂತವು ಇಂದು (ಮೇ 13) 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಇಂದು 96…

1 hour ago