ಶಿವಮೊಗ್ಗ

ರಾಮ ಎಲ್ಲರಿಗೂ ಬೇಕಾಗಿರುವಂತಹವನು: ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ: ಅಯೋಧ್ಯೆಯಲ್ಲಿ ಜ.22 ರಂದು ರಾಮ ಮಂದಿರ ಪ್ರತಿಷ್ಠಾಪನೆ ಆಗ್ತಿರೋದು ಇಡಿ ವಿಶ್ವದ ಗಮನ ಸೆಳೆದಿದೆ. ಆದರೆ ಕಾಂಗ್ರೆಸ್ ನವರಿಗೆ ಅಸಮಾಧಾನ ಹಾಗೂ ಅತೃಪ್ತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.

ಸ್ವಗೃಹದಲ್ಲಿ ತಮನ್ನ ಭೇಟಿಯಾದ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರೊಯಿಸುತ್ತಾ ಈಡಿ ದೇಶದ ಜನ ರಾಮಮಂದಿರದ ಬಗ್ಗೆ ಆಗುಹೋಗುಗಳನ್ನ ಗಮನಿಸುತ್ತಿದ್ದಾರೆ. ಕಾಂಗ್ರೆಸ್ ನವರಿಗೆ ಅಸಮಾಧಾನ, ಅತೃಪ್ತಿ ಇದೆ. ಬಿಜೆಪಿಯವರಿಗೆ ಅನುಕೂಲ ಆಗಬಹುದು ಅಂತಾ ಭಯ ಅವರಿಗೆ ಕಾಡ್ತಿದೆ ಎಂದು ದೂರಿದರು.

ಎಲ್ಲಾ ಪಕ್ಷದವರು ಬಂದು ಭಾಗವಹಿಸಬೇಕು ಎಂಬುದು ಮೋದಿ ಅಪೇಕ್ಷೆಯಿದೆ. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರಧಾನಮಂತ್ರಿ ಉಪವಾಸ ಇದ್ದು ಸೇವೆ ಮಾಡ್ತಿದ್ದಾರೆ. ಇನ್ನಾದರೂ‌ ಕಾಂಗ್ರೆಸ್ ನವರಿಗೆ ಸದ್ಬುದ್ದಿ ಬಂದು ಕಾರ್ಯಕ್ರಮದಲ್ಲಿ ಭಾಗವಹಿಸಲಿ. ಇಲ್ಲದಿದ್ದರೆ ಜನ ಈ ರೀತಿ ನಡವಳಿಕೆ ಸಹಿಸಲ್ಲ. ಇದರಿಂದ ಅವರಿಗೆ ತೊಂದರೆ ಆಗ್ತದೆ ಎಂದು ದೂರಿದರು.

ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಆದ ಮೇಲೆ ಹೋಗ್ತೀನಿ ಅಂದಿದ್ದಾರೆ. ಈ ಸಂದರ್ಭದಲ್ಲಿ ಹೋಗಿ ಬಂದ್ರೆ ಒಳ್ಳೆಯದು, ಅನುಕೂಲ ಆಗ್ತದೆ. ಅದು ಅವರಿಗೆ ಬಿಟ್ಟದ್ದು ಎಂದ ಬಿಎಸ್ ವೈ, ಶಿವಮೊಗ್ಗದ ಫ್ರೀಡಂ ಪಾರ್ಕ್ ಗೆ ಅಲ್ಲಮ ಪ್ರಭು ಹೆಸರು ನಾಮಕರಣ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ನಾನು ಅದರ ಬಗ್ಗೆ ಏನೇ ಟೀಕೆ ಟಿಪ್ಪಣಿ ಮಾಡಲ್ಲ. ಒಳ್ಳೆಯ ಕೆಲಸ ಯಾರು ಮಾಡಿದರೂ ಒಳ್ಳೆಯದು. ಎಲ್ಲರೂ ಸೇರಿ ಮಾಡಲಿ ಎಂದು ಸಲಹೆ ನೀಡಿದರು.

ಪೇಜಾವರ ಶ್ರೀಗಳ ಹೇಳಿಕೆ ವಿಚಾರದ ಬಗ್ಗೆನೂ ಪ್ರತಿಕ್ರಿಯಿಸಿರುವ ಬಿಎಸ್ ವೈ ಅವರು ಏನು ಹೇಳಿದರೋ ತಪ್ಪು ಕಲ್ಪನೆ ಬೇಡ, ಹಿಂದು ಮುಸ್ಲಿಂ ಕ್ರಿಶ್ಚಿಯನ್ ಅಂತಲ್ಲ. ಮುಸ್ಲಿಂರು ಸಹ ರಾಮನಿಗಾಗಿ ಪಾದಯಾತ್ರೆ ಮೂಲಕ ಹೋಗ್ತಿದ್ದಾರೆ. ಎಲ್ಲಾ ವರ್ಗದ ಜನ ಸಹಕಾರ ಕೊಡ್ತಿದ್ದಾರೆ.ರಾಮ ಎಲ್ಲರಿಗೂ ಬೇಕಾಗಿರುವಂತಹವನು. ಹಿಂದು ಮುಸ್ಲಿಂ ಕ್ರಿಶ್ಚಿಯನ್ ಎಲ್ಲರಿಗೂ ಈ ರೀತಿ‌ ಭೇಧ ಭಾವ ಮಾಡೋದು ಸರಿಯಲ್ಲ ಎಂದು ಸಲಹೆ ನೀಡಿದರು.

ಗ್ಯಾರಂಟಿ ಯೋಜನೆ ಬಗ್ಗೆ ಟೀಕೆ ಮಾಡಲ್ಲ. ಒಳ್ಳೆಯ ಕೆಲಸ ಮಾಡಿದ್ರೆ ಸ್ವಾಗತ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಪ್ರವಾಸ ಆರಂಭವಾಗಿದೆ. ವಿಜಯೇಂದ್ರ‌ ಅಧ್ಯಕ್ಷರಾದ ಮೇಲೆ ಎಲ್ಲಾ ಕಡೆ ಓಡಾಡಿ ಸಂಘಟನೆ ಮಾಡ್ತಿದ್ದಾರೆ.ಒಳ್ಳೆಯ ಬೆಂಬಲ ಸಿಗ್ತಿದೆ. ಇನ್ನು 2-3 ದಿನ ಆದ ಮೇಲೆ ನಾನು ಸಹ ದಿನಕ್ಕೆ ಎರಡು ಜಿಲ್ಲೆಯಂತೆ ಪ್ರವಾಸ ಮಾಡ್ತೇನೆ. ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಹೈಕಮಾಂಡ್ ನಿರ್ಧಾರ ಮಾಡ್ತದೆ ಎಂದು ತಿಳಿಸಿದರು.

Ashika S

Recent Posts

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

22 mins ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

38 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

1 hour ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

1 hour ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

2 hours ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

2 hours ago