ರಾಜ್ಯ ಬಿಜೆಪಿ ವಿಸರ್ಜನೆ ಮಾಡಿಬಿಡಿ ಎಂದು ಆಕ್ರೋಶ ಹೊರಹಾಕಿದ ರೇಣುಕಾಚಾರ್ಯ

ಶಿವಮೊಗ್ಗ: ರಾಜ್ಯ ಬಿಜೆಪಿ ಘಟಕದ ಬಗ್ಗೆ ಆಗಾಗ್ಗೆ ಕೆಂಡ ಕಾರುತ್ತಲೇ ಇರುವ ಮಾಜಿ ಸಚಿವ ರೇಣುಕಾಚಾರ್ಯ ಮತ್ತೊಮ್ಮೆ ಬಿಜೆಪಿ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಕಡೆಗಣಿಸುತ್ತಿರುವ ಬಗ್ಗೆ ಆಕ್ರೋಶದ ಮಾತುಗಳನ್ನಾಡಿದ ಎಂಪಿ ರೇಣುಕಾಚಾರ್ಯ, ಕೋರ್ ಕಮಿಟಿ ಯಾಕೇ ಬೇಕು? ರಾಜ್ಯ ಬಿಜೆಪಿ ವಿಸರ್ಜನೆ ಮಾಡಿಬಿಡಿ ಎಂದು ಹೇಳಿದ್ದಾರೆ. ಯಡಿಯೂರಪ್ಪ ಬಿಟ್ಟು ಬಿಜೆಪಿ ನಿಯಂತ್ರಣ ಮಾಡಿದರೆ ಆಗುತ್ತಾ? ನಿಮ್ಮ ನಿಯಂತ್ರಣದಲ್ಲಿ ಬಿಜೆಪಿ ಬೇಕಾ? ಯಡಿಯೂರಪ್ಪ ಅವರನ್ನು ಮುಗಿಸಿದರಲ್ವ, ಈಗ ನಾಯಕತ್ವ ಎಲ್ಲಿದೆ? ಆತ್ಮಾವಲೋಕನ ಮಾಡಿಕೊಳ್ಳಿ.

ರಾಜಕಾರಣದಲ್ಲಿ ಸರ್ವಾಧಿಕಾರಿ ಧೋರಣೆ ಮಾಡಬೇಡಿ. ರಾಜ್ಯಸಭೆ, ವಿಧಾನಪರಿಷತ್ ನೇಮಕ ಆದವರು ಯಾರಿಗೋ ಮಂಡಿಯೂರಿದ್ದಾರೆ. ಹೋರಾಟ ಹಿನ್ನೆಲೆಯಿಂದ ಯಡಿಯೂರಪ್ಪ ಬಂದವರು. ನಾನು ಕೂಡ ಪಾದಯಾತ್ರೆ ಮಾಡಿ ಬಂದವನು. ರಾಜ್ಯದಲ್ಲಿ ಯಡಿಯೂರಪ್ಪ ನಿರ್ಲಕ್ಷಿಸಿದರೆ ಬಿಜೆಪಿ ಇನ್ನಷ್ಟು ನೆಲೆಕಚ್ಚುತ್ತದೆ. ಯಡಿಯೂರಪ್ಪ ಒಬ್ಬ ಶಿಲ್ಪಿಯಿದ್ದಂತೆ. ನಾನೊಬ್ಬ ಕಾಡುಗಲ್ಲು ರೀತಿ ಆಗಿದ್ದೆ. ನನ್ನನ್ನು ಪರಿವರ್ತನೆ ಮಾಡಿದವರು ಯಡಿಯೂರಪ್ಪ. ಇಲ್ಲವೆಂದರೆ ಬೀಡಿ ಸೇದುತ್ತ, ಎಣ್ಣೆ ಹೊಡ್ಕೊಂಡು ಇರುತ್ತಿದ್ದೆ ಎಂದರು.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

2 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

2 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

2 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

3 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

4 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

5 hours ago