ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಬಿಳಕಿ ಗ್ರಾಮದ ಬಳಿ ಖಾಸಗಿ ಶಾಲಾ ಬಸ್ ಪಲ್ಟಿಯಾಗಿ 25 ಕ್ಕೂ ಅಧಿಕ ಮಕ್ಕಳಿಗೆ ಗಾಯವಾದ ಘಟನೆ ನಡೆದಿದೆ.
ಭದ್ರಾವತಿಯ ಸ್ಫೂರ್ತಿ ಇಂಟರ್ ನ್ಯಾಷನಲ್ ಶಾಲೆಗೆ ಸೇರಿದ ಶಾಲಾ ಬಸ್ ಇದಾಗಿದ್ದು, ಎದುರುಗಡೆಯಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡಲು ಹೋಗಿ ಪಲ್ಟಿಯಾಗಿದೆ.
ಸದ್ಯ ಗಾಯಾಳು ಮಕ್ಕಳಿಗೆ ಭದ್ರಾವತಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.