News Karnataka Kannada
Monday, April 29 2024
ಶಿವಮೊಗ್ಗ

ಶಿವಮೊಗ್ಗ: ಬಸ್‌ಗಳ ನಡುವೆ ಅಪಘಾತ ಸಂಭವಿಸಿ 40 ಮಂದಿಗೆ ಗಾಯ

Four killed in accident between truck and car
Photo Credit :

ಶಿವಮೊಗ್ಗ: ಲಕ್ಕಿನಕೊ‍ಪ್ಪ ಸಮೀಪದ ತೋಟದ ಕೆರೆ ಬಳಿ ಬಸ್‌ಗಳ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಚಾಲಕರು ಸೇರಿ 40 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆಎಸ್‌ಆರ್‌ಟಿಸಿ ಹಾಗೂ ಕೆಕೆಬಿ ಸಂಸ್ಥೆಯ ಖಾಸಗಿ ಬಸ್‌ಗಳ ನಡುವೆ ಡಿಕ್ಕಿ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಬರುತ್ತಿತ್ತು. ಖಾಸಗಿ ಬಸ್ ಶಿವಮೊಗ್ಗದಿಂದ ಕೊಪ್ಪಕ್ಕೆ ತೆರಳುತ್ತಿತ್ತು. ಅಪಘಾತದಲ್ಲಿ ಸಾರಿಗೆ ಸಂಸ್ಥೆ ಬಸ್ ಚಾಲಕ ಮಲ್ಲೇಶ್ (34) ಹಾಗೂ ಖಾಸಗಿ ಬಸ್ ಚಾಲಕ ಶ್ರೀಧರ್ ಭಟ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟದ ಕೆರೆ ಗ್ರಾಮದ ಬಳಿಯ ತಿರುವಿನಲ್ಲಿ ಚಾಲಕರ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ಎರಡೂ ಬಸ್ಸುಗಳ ಮುಂಭಾಗ ನುಜ್ಜುಗುಜ್ಜಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ಸ್ಥಳೀಯರು ನೆರವಾದರು.

ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು