ಶಿವಮೊಗ್ಗ: ಜಿಲ್ಲೆಯಲ್ಲಿ ನಡೆದ ಗಲಭೆಯಲ್ಲಿ ಚಾಕು ಇರಿತಕ್ಕೊಳಗಾದ ಗಾಂಧಿಬಜಾರ್ ಸಮೀಪದ ಉಪ್ಪಾರಕೇರಿಯ ಪ್ರೇಮ್ ಸಿಂಗ್ ಮೆಗ್ಗಾನ್ ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಇತಿಹಾಸ ಗೊತ್ತಿಲ್ಲದ ಕೆಲವು ಫುಡಾರಿಗಳು ವೀರ ಸಾವರ್ಕರ್ ಅವರಿಗೆ ಅಪಚಾರ ಮಾಡಿರುವುದು ಖಂಡನೀಯ. ನಗರದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದರು.
ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಗಲಭೆಯಲ್ಲಿ ಚಾಕು ಇರಿತಕ್ಕೊಳಗಾದ ಗಾಂಧಿಬಜಾರ್ ಸಮೀಪದ ಉಪ್ಪಾರಕೇರಿಯ ಪ್ರೇಮ್ ಸಿಂಗ್ ಮೆಗ್ಗಾನ್ ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ಭೇಟಿ ಮಾಡಿ, ಅವರ ಆರೋಗ್ಯವನ್ನು ವಿಚಾರಿಸಿ, ಶೀಘ್ರ ಗುಣಮುಖವಾಗಲೆಂದು ಹಾರೈಸಲಾಯಿತು.(1/2) pic.twitter.com/Dkp49sXnOa
— Vijayendra Yeddyurappa (@BYVijayendra) August 16, 2022
ಇಂತಹ ಘಟನೆಗಳು ಪುನರಾವರ್ತನೆ ಆಗುತ್ತಿರುವುದರ ಹಿಂದೆ ದೊಡ್ಡ ಪಿತೂರಿ ಇದೆ ಎಂದು ಗೊತ್ತಾಗಿದೆ. ಪೊಲೀಸರು ಸಂದರ್ಭಾನುಸಾರ ಸೂಕ್ತ ತೀರ್ಮಾನ ಕೈಗೊಂಡಿದ್ದಾರೆ. ವೀರ ಸಾವರ್ಕರ್ ಅವರಿಗೆ ಪ್ರಶ್ನೆ ಮಾಡುತ್ತಿರುವ ಈ ಫುಡಾರಿಗಳಿಗೆ ಕಾಂಗ್ರೆಸ್ ಬೆಂಬಲವೂ ಇದೆ. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಈ ರೀತಿಯ ವರ್ತನೆ ಯಾರಿಗೂ ಶೋಭೆ ತರುವುದಿಲ್ಲ. ಈ ರೀತಿ ಅಶಾಂತಿ ಮೂಡಿಸಿದವರ ಮೇಲೆ ಕೂಡ ಪರಿಣಾಮ ಬೀರುತ್ತದೆ ಎನ್ನುವುದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದರು.