News Karnataka Kannada
Monday, April 29 2024
ಶಿವಮೊಗ್ಗ

ಶಿವಮೊಗ್ಗ: ನಗರದಲ್ಲಿ ಬಾಲ ಕಾರ್ಮಿಕ ತಪಾಸಣೆ ಕಾರ್ಯಕ್ರಮ

Child labour screening in city
Photo Credit : By Author

ಶಿವಮೊಗ್ಗ:  ಶಿವಮೊಗ್ಗ ನಗರದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿಯಿಂದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆ 1986 ಮತ್ತು ತಿದ್ದುಪಡಿ ಕಾಯ್ದೆ 2016 ರಡಿ ನಗರದ ದುರ್ಗಿಗುಡಿ, ಜೈಲ್ ಸರ್ಕಲ್, ಎಲ್.ಎಲ್.ಆರ್ ರಸ್ತೆಗಳಲ್ಲಿ ತಪಾಸಣೆ ಹಮ್ಮಿಕೊಳ್ಳಲಾಯಿತು.

ತಪಾಸಣೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರಾವಸ್ಥೆಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿಕಾಯ್ದೆ 2016 ಕಲಂ 3ರನ್ವಯ 14 ವರ್ಷದೊಳಗಿನ ಬಾಲಕಾರ್ಮಿಕರನ್ನು ಹಾಗೂ ಕಲಂ 3(ಎ)ರನ್ವಯಅಪಾಯಕಾರಿ ಉದ್ದಿಮೆ/ಕೈಗಾರಿಕೆಗಳಲ್ಲಿ 18 ವರ್ಷದೊಳಗಿನ ಕಿಶೋರರರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಅಥವಾ ಕೆಲಸ ಮಾಡಲು ಅವಕಾಶ ಮಾಡಿಕೊಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ.  ನೇಮಿಸಿಕೊಂಡ ಮಾಲೀಕರ ವಿರುದ್ಧ ನ್ಯಾಯಾಲಯವು ಕನಿಷ್ಠ ರೂ20,000/- ದಿಂದಗರಿಷ್ಠ 50,000/- ದವರೆಗೆ ದಂಡವನ್ನು ಅಥವಾ 6 ತಿಂಗಳಿನಿಂದ 2ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿರುತ್ತದೆ ಎಂಬ ಮಾಹಿತಿಯನ್ನು ತಿಳಿಸಲಾಯಿತು.

ಈ ತಪಾಸಣಾ ತಂಡದಲ್ಲಿ ಕಾರ್ಮಿಕ ನಿರೀಕ್ಷಕರಾದ ಭೀಮೇಶ್, ಯೋಜನಾ ನಿರ್ದೇಶಕ ರಘುನಾಥ, ಶಿಕ್ಷಣ ಇಲಾಖೆಯ ಅಶೋಕ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಶಾಂತಾಬಾಯಿ ಮತ್ತು ಪುನೀತ್ ಹಾಗೂ ಮಕ್ಕಳ ಸಹಾಯವಾಣಿಯ ಮೇರಿ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು