News Karnataka Kannada
Saturday, April 27 2024
ಶಿವಮೊಗ್ಗ

ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ನ್ಯಾಯಾಲಯ

ಹೆಂಡತಿ ಕೊಲೆ ಮಾಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆಕೆಯ ಪತಿಗೆ ಬೀದರ್‌ನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
Photo Credit : By Author

ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪಿಗೆ ದ ಎಡಿಡಿಎಲ್ ಡಿಸ್ಟ್ರಿಕ್ಟ್ ಆಂಡ್ ಸೆಷನ್ಸ್ ಕೋರ್ಟ್, ಎಫ್ಟಿಎಸ್ಸಿ–ಇಇ (ಪೊಕ್ಸೊ) ಶಿವಮೊಗ್ಗ ನ್ಯಾಯಾಲಯ 1 ಲಕ್ಷ ದಂಡ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿದೆ.

ಭದ್ರಾವತಿ ತಾಲ್ಲೂಕಿನ 19 ವರ್ಷದ ಯುವಕನೊಬ್ಬನು 06 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುತ್ತಾನೆಂದು ನೊಂದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.

ಪ್ರಕರಣದಲ್ಲಿ ತನಿಖಾಧಿಕಾರಿಗಳಾದ ಲಕ್ಷ್ಮೀಪತಿ, ಪಿಐ, ಹೊಳೆಹೊನ್ನೂರು ಪೊಲೀಸ್ ಠಾಣೆರವರು ತನಿಖೆ ಕೈಗೊಂಡು ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, ವಿಚಾರಣೆ ನಡೆಸಿದ ದಎಡಿಡಿಎಲ್ ಡಿಸ್ಟ್ರಿಕ್ಟ್ ಆಂಡ್ ಸೆಷನ್ಸ್ ಕೋರ್ಟ್, ಎಫ್ಟಿಎಸ್ಸಿ–ಇಇ (ಪೊಕ್ಸೊ) ಶಿವಮೊಗ್ಗ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ಮೋಹನ ಜೆ. ಎಸ್ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ 1 ಲಕ್ಷ ರೂ ದಙಡಕಟ್ಟಲು ತೀರ್ಪು ನೀಡಿದೆ.

ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು