News Karnataka Kannada
Monday, May 06 2024
ಶಿವಮೊಗ್ಗ

ಶಿವಮೊಗ್ಗ: ಅನಧಿಕೃತವಾಗಿ ಜಾನುವಾರಗಳ ವಧೆ ಆಗದಂತೆ ಕ್ರಮ ವಹಿಸಲು ಡಿಸಿ ಸೂಚನೆ

DC instructs officials to take steps to prevent unauthorized slaughter of cattle
Photo Credit : By Author

ಶಿವಮೊಗ್ಗ, ಜುಲೈ.1: ಬಕ್ರೀದ್ ಹಬ್ಬದ ವೇಳೆ ಅನಧಿಕೃತವಾಗಿ ಪ್ರಾಣಿಗಳ ವಧೆ ಹಾಗೂ ಪ್ರಾಣಿ ಸಾಗಾಣಿಕೆ ಮಾಡುವುದನ್ನು ತಡೆಯುವ ಕುರಿತು ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚನೆ ನೀಡಿದರು.

ಬಕ್ರೀದ್ ಹಬ್ಬದ ದಿನಗಳಲ್ಲಿ ಅಕ್ರಮ ಒಂಟೆ/ಗೋವು ಹತ್ಯೆ ತಡೆಗಟ್ಟಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಜಿಲ್ಲಾ ಸಮಿತಿ ಸಭೆಯಯನ್ನು ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದು ಅದರ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಕ್ರೀದ್ ವೇಳೆ ಕಾನೂನುಬಾಹಿರ ಜಾನುವಾರುಗಳ ವಧೆ ಮತ್ತು ಸಾಗಾಣಿಕೆ ಕಂಡು ಬಂದಲ್ಲಿ ಪಶುಪಾಲನಾ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ರಚಿಸಲಾಗಿರುವ ತಂಡ ಸೂಕ್ತ ವಹಿಸಬೇಕು. ಹಬ್ಬದ ವೇಳೆ ಸಾರ್ವಜನಿಕ ಕಸಾಯಿಖಾನೆಗಳಲ್ಲಿ ಸ್ವಚ್ಚತೆ ಕಾಪಾಡಬೇಕು, ತ್ಯಾಜ್ಯವನ್ನು ಅಲ್ಲಲ್ಲಿ ಎಸೆಯದಂತೆ ಸೂಚನೆ ನೀಡಿ, ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡಲು ಪಾಲಿಕೆ ವತಿಯಿಂದ ಒಂದು ಹೆಚ್ಚುವರಿ ತಂಡ ರಚಿಸಬೇಕು. ಹಾಗೂ ಇತರೆ ಮೂಲಭೂತ ಸೌಕರ್ಯಗಳ ಬಗ್ಗೆ ಗಮನ ಹರಿಸಬೇಕು ಎಂದರು.ಹಾಗೂ ಗಲಭೆ, ದೊಂಬಿಗಳು ಉಂಟಾದಲ್ಲಿ ತಕ್ಷಣ ಪೊಲೀಸ್ ಇಲಾಖೆಯ ತಂಡಕ್ಕೆ ತಿಳಿಸಬೇಕು. ವಿಶೇಷ ತಂಡವು ಹಬ್ಬದ ಸಮಯದಲ್ಲಿ ನಿಗದಿಪಡಿಸಲಾದ ಸಮಯದವರೆಗೆ ಕರ್ತವ್ಯನಿರತರಾಗಿದ್ದು ಯಾವುದೇ ರೀತಿಯಲ್ಲಿ ಅಹಿತಕರ ಘಟನೆ ಆಗದಂತೆ ನಿಗಾ ವಹಿಸಬೇಕು. ಮಾಲಿನ್ಯ ನಿಯಂತ್ರಣ ಮಂಡಳಿ, ಆರ್‍ಟಿಓ ಮತ್ತು ಮಹಾನಗರಪಾಲಿಕೆಯು ಪೊಲೀಸ್ ಮತ್ತು ಪಶುಪಾಲನಾ ಇಲಾಖೆಯ ಸಹಯೋಗದೊಂದಿಗೆ ತಂಡದಲ್ಲಿ ಕರ್ತವ್ಯ ನಿರ್ವಹಿಸಬೇಕೆಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ.ಲಕ್ಷ್ಮಿಪ್ರಸಾದ್ ಮಾತನಾಡಿ, ಯಾವುದೇ ರೀತಿಯ ಗಲಭೆಯಂತಹ ಘಟನೆ ಸಂಭವಿಸಿದರೆ ತಕ್ಷಣ ನಮಗೆ ತಿಳಿಸಬೇಕು. ತಾಲ್ಲೂಕುಗಳು ಮತ್ತು ನಗರದಲ್ಲಿ ಹಬ್ಬದ ದಿನ ಗಸ್ತು ತಿರುಗಲು ಒಂದು ತಂಡವನ್ನು ರಚಿಸಬೇಕೆಂದು ತಿಳಿಸಿದರು.

ಸಭೆಯಲ್ಲಿ ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಶಿವಯೋಗಿ ಎಲಿ, ಪಾಲಿಕೆ ಪಶುವೈದ್ಯಾಧಿಕಾರಿ ಡಾ.ರೇಖಾ, ಆರ್‍ಟಿಓ ಅಧಿಕಾರಿ, ಇತರೆ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು