ಶಿವಮೊಗ್ಗ: ಹೊಸನಗರ ತಾಲೂಕಿನ ಗರ್ತಿಕೆರೆ ಕಾಲೇಜು ಸಮೀಪದಲ್ಲಿ ಬೆಳಂಬೆಳಗ್ಗೆ ಸಂಭವಿದ ರಸ್ತೆ ಅಪಘಾತದಲ್ಲಿ ಗರ್ತಿಕೆರೆ ನಿವಾಸಿ ಮೀನು ವ್ಯಾಪಾರಿ ಕಬೀರ್ ಸಾಬ್ (72) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ತೀರ್ಥಹಳ್ಳಿ ಕಡೆಯಿಂದ ರಿಪ್ಪನ್ಪೇಟೆ ಕಡೆಗೆ ಟಿವಿಎಸ್ ಮೊಪೆಡ್ ನಲ್ಲಿ ಹೊರಟು ನಿಂತಿದ್ದ ಕಬೀರ್ ಸಾಬ್ ಗೆ ಹಿಂಬದಿಯಿಂದ ವೇಗವಾಗಿ ಬಂದ ಬೊಲೆರೋ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ್ ಸವಾರ ಸ್ಥಳದಲ್ಲೇ ಸಾವುಕಂಡಿದ್ದಾರೆ. ಈ ಭೀಕರ ಅಪಘಾತದಲ್ಲಿ ಬೊಲೆರೋ ವಾಹನ ಸಹ ಪಲ್ಟಿಯಾಗಿದ್ದು ಸಂಪೂರ್ಣ ನಜ್ಜುಗುಜ್ಜಾಗಿದೆ.
ಮೃತದೇಹವನ್ನು ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.