ಶಿವಮೊಗ್ಗ

ಶಿವಮೊಗ್ಗ: ರಸ್ತೆ ಅಪಘಾತ, ಮೀನು ವ್ಯಾಪಾರಿ ಸಾವು

ಶಿವಮೊಗ್ಗ: ಹೊಸನಗರ ತಾಲೂಕಿನ ಗರ್ತಿಕೆರೆ ಕಾಲೇಜು ಸಮೀಪದಲ್ಲಿ ಬೆಳಂಬೆಳಗ್ಗೆ ಸಂಭವಿದ ರಸ್ತೆ ಅಪಘಾತದಲ್ಲಿ ಗರ್ತಿಕೆರೆ ನಿವಾಸಿ ಮೀನು ವ್ಯಾಪಾರಿ ಕಬೀರ್ ಸಾಬ್ (72) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ‌.

ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಟಿವಿಎಸ್ ಮೊಪೆಡ್ ನಲ್ಲಿ ಹೊರಟು ನಿಂತಿದ್ದ ಕಬೀರ್ ಸಾಬ್ ಗೆ ಹಿಂಬದಿಯಿಂದ ವೇಗವಾಗಿ ಬಂದ ಬೊಲೆರೋ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ‌.

ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ್ ಸವಾರ ಸ್ಥಳದಲ್ಲೇ ಸಾವುಕಂಡಿದ್ದಾರೆ. ಈ ಭೀಕರ ಅಪಘಾತದಲ್ಲಿ ಬೊಲೆರೋ ವಾಹನ ಸಹ ಪಲ್ಟಿಯಾಗಿದ್ದು ಸಂಪೂರ್ಣ ನಜ್ಜುಗುಜ್ಜಾಗಿದೆ.

ಮೃತದೇಹವನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ashika S

Recent Posts

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

3 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

39 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

57 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

1 hour ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 hours ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago