ಶಿವಮೊಗ್ಗ

ಶಿವಮೊಗ್ಗ: ಕೊಡಚಾದ್ರಿ ಕೇಬಲ್ ಕಾರ್ ಯೋಜನೆ ಶೀಘ್ರ ಅನುಷ್ಠಾನ- ಬಿ. ವೈ ರಾಘವೇಂದ್ರ

ಶಿವಮೊಗ್ಗ: ದಿನಾಂಕ 18-11-2022 ರ ಶನಿವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಕೊಡಚಾದ್ರಿಯ ಸರ್ವಜ್ಞ ಪೀಠದಿಂದ – ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವರೆಗೆ ಕೇಬಲ್ ಕಾರ್ ಅಳವಡಿಸಿವ ಕಾಮಗಾರಿಗೆ ಕೇಂದ್ರದ ಭೂ ಸಾರಿಗೆ ಮಂತ್ರಾಲಯದ ನ್ಯಾಷನಲ್ ಹೈವೇಸ್ ಲಾಜಿಸ್ಟಿಕ್ಸ್ ಮ್ಯಾನೇಜ್ಮೆಂಟ್ ಲಿಮಿಟೆಡ್ (ಎನ್ಎಚ್ಎಲ್ಎಂಎಲ್) ಅಧಿಕಾರಿಗಳ ತಂಡವು ಡಿಪಿಆರ್ ಮತ್ತು ಪತನ ನಕ್ಷೆಯನ್ನು ಅಂತಿಮಗೊಳಿಸಲು ಹಾಗೂ ಡಿಪಿಆರ್ ಅನುಮೋದನೆಗೆ ಇರುವ ತೊಡಕುಗಳ ಬಗ್ಗೆ ಅಭ್ಯಾಸ ಮಾಡಿ, ಪರಿಶೀಲಿಸುವ ನಿಟ್ಟಿನಲ್ಲಿ ಎರಡು ದಿನದ ಸರ್ವೇ ಕಾರ್ಯ ಮತ್ತು ಸ್ಥಳ ಪರಿಶೀಲನೆ ನೆಡೆಸಿದ್ದಾರೆ.

ಕೇಬಲ್ ಕಾರ್ ನಿರ್ಮಾಣಕ್ಕೆ ಇರುವ ಸಮಸ್ಯೆಯ ಕುರಿತು ದಿನಾಂಕ 19-11-2022 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ ರಾಘವೇಂದ್ರ ಅವರೊಂದಿಗೆ ಚರ್ಚಿಸಿದ್ದು. ” ಕೇಂದ್ರದ ಪರ್ವತ ಮಾಲಾ ಅಡಿಯಲ್ಲಿ ಬರುವ ನೂತನ ಕೇಬಲ್ ಕಾರ್ ಯೋಜನೆಯು ಶೀಘ್ರ ಅಳವಡಿಸುವ ಕಾರ್ಯ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ”.

ಕೊಡಚಾದ್ರಿಯಿಂದ ಕೊಲ್ಲೂರಿನವರೆಗೆ ಕೇಬಲ್ ಕಾರ್ ನಿರ್ಮಾಣಕ್ಕೆ ಇರುವ ತೊಡಕುಗಳನ್ನು ಪರಿಹರಿಸಲು ಪ್ರವಾಸೋಧ್ಯಮ ಇಲಾಖೆ, ಅರಣ್ಯ ಇಲಾಖೆ, ರಾಷ್ಟೀಯ ಹೆದ್ದಾರಿ ಅಧಿಕಾರಿಗಳ ಜೊತೆಗೆ ಸೇರಿ ಪರಿಹರಿಸಿ, ಕನಿಷ್ಠ ಒಂದು ತಿಂಗಳ ಅವಧಿಯಲ್ಲಿ ಡಿಪಿಆರ್ ಮಂಜೂರಾತಿ ಪಡೆಯುವುದಾಗಿ ತಿಳಿಸಿರುತ್ತಾರೆ.

ಈ ಸಂದರ್ಭದಲ್ಲಿ ಎನ್ಎಚ್ಎಲ್ಎಂಎಲ್ ದೆಹಲಿಯ ಹಿರಿಯ ಮ್ಯಾನೇಜರ್ ಅನುರಾಗ್ ತ್ರಿಪಾಟಿ, ಎನ್ಎಚ್ಎಲ್ಎಂಎಲ್ ಬೆಂಗಳೂರು ಮ್ಯಾನೇಜರ್ ರೀನಾ ಪವಾರ್, ರಾಷ್ಟ್ರೀಯ ಹೆದ್ದಾರಿ ಇಲಾಖೆ ಶಿವಮೊಗ್ಗದ ಪೀರ್ ಪಾಷಾ, ಡಿಪಿಆರ್ ಕನ್ಸಲ್ಟೆಂಟ್ ಶ್ರವಣ ಕುಮಾರ್, ಪ್ರವಾಸೋಧ್ಯಮ ಇಲಾಖೆಯ ಗುರುಪ್ರಸಾದ್, ವೆಂಕಟೇಶ್ ಕಿಣಿ, ಶಿವಕುಮಾರ್ ವನ್ಯಜೀವಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾಹಿತಿ :
ಸಂಸದರ ಕಾರ್ಯಾಲಯ.
ಶಿವಮೊಗ್ಗ

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago