ಶಿವಮೊಗ್ಗ: ಕೆಎಸ್ಆರ್ ಟಿ ಸಿ ಬಸ್ ಸೌಕರ್ಯ ಒದಗಿಸುವಂತೆ ಪ್ರತಿಭಟನೆ

ಶಿವಮೊಗ್ಗ: ಗ್ರಾಮಾಂತರ ಪ್ರದೇಶಗಳು ಈಗ ಶೈಕ್ಷಣಿಕ ಹಬ್ ಆಗುತ್ತಿದ್ದು ಈ ಭಾಗಕ್ಕೆ ಸೂಕ್ತ ಕೆಎಸ್ಆರ್ ಟಿ ಸಿ ಬಸ್ ಸೌಕರ್ಯ ಒದಗಿಸುವಂತೆ ಎನ್ ಎಸ್ ಐ ಗ್ರಾಮಾಂತರ ಘಟಕ ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿತು.

ಶಿವಮೊಗ್ಗದಿಂದ ನೂರಾರು ವಿದ್ಯಾರ್ಥಿಗಳು ಶಂಕರಘಟ್ಟದ ಕುವೆಂಪು ವಿವಿಗೆ ಹೋಗುತ್ತಾರೆ. ಅದರೆ, ಇಲ್ಲಿಗೆ ಕೇವಲ ಒಂದು ಕೆಎಸ್ ಆರ್ ಟಿ ಸಿ ಬಸ್ ಮಾತ್ರ ಸಂಚರಿಸುತ್ತಿದೆ. ಶಿವಮೊಗ್ಗದ ಸುತ್ತಮುತ್ತಲ ಹಲವಾರು ಪ್ರದೇಶಗಳಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ವ್ಯವಸ್ಥೆ ಇಲ್ಲದೇ ಇರುವುದರಿಂದ ಗ್ರಾಮೀಣ ವಿದ್ಯಾರ್ಥಿಗಳು ದುಬಾರಿ ಪ್ರಯಾಣ ದರ ಭರಿಸಬೇಕಾಗುತ್ತಿದೆ. ಸರ್ಕಾರ ಗ್ರಾಮೀಣ ವಿದ್ಯಾರ್ಥಿಗಳಿಗೆಂದೇ ರೂಪಿಸಿರುವ ಬಸ್‍ಪಾಸ್ ಸೌಲಭ್ಯ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲವೆಂದು ಪದರತಿಭಟನಾ ಕಾರರು ಆಗ್ರಹಿಸಿದರು.

ಇನ್ನು ಸಾಗರ ರಸ್ತೆಯಲ್ಲಿ ಸಂಚರಿಸುವ ಬಸ್‍ಗಳು ವಾಜಪೇಯಿ ಬಡಾವಣೆಯ ವಿದ್ಯಾರ್ಥಿ ನಿಲಯದ ಬಳಿ ನಿಲುಗಡೆ ಮಾಡುತ್ತಿಲ್ಲ. ಇದರಿಂದಾಗಿ ಈ ಭಾಗದಿಂದ ಬರುವ ವಿದ್ಯಾರ್ಥಿಗಳು ಶಿವಮೊಗ್ಗ ಬಸ್ ನಿಲ್ದಾಣಕ್ಕೆ ಬಂದು ಮತ್ತೆ ಆಟೋ ಇಲ್ಲವೇ ಖಾಸಗಿ ಬಸ್‍ಗಳ ಮೂಲಕ ವಿದ್ಯಾರ್ಥಿ ನಿಲಯಕ್ಕೆ ಹೋಗಬೇಕಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಹಣ – ಸಮಯ ವ್ಯರ್ಥವಾಗುತ್ತಿದೆ ಎಂದು ಆರೋಪಿಸಲಾಗಿದೆ.

ಕೂಡಲೇ ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳ ಬೇಡಿಕೆಗನುಗುಣವಾಗಿ ಕೆಎಸ್ಆರ್ ಟಿಸಿ ಬಸ್ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿ ನಿಲಯಗಳು, ಶಾಲಾ ಕಾಲೇಜುಗಳ ಬಳಿ ಬಸ್‍ಗಳ ನಿಲುಗಡೆಗೊಳಿಸಲು ಸೂಕ್ತ ಆದೇಶ ಮಾಡಬೇಕು ಎಂದು ಈ ಮೂಲಕ ಆಗ್ರಹಿಸುತ್ತಿದ್ದೇವೆ.
ಪರೀಕ್ಷಾ ಸಮಯ ಹತ್ತಿರವಾಗುತ್ತಿದ್ದು, ಬಸ್ ಸೌಕರ್ಯ ಸಿಗದೇ ವಿದ್ಯಾರ್ಥಿಗಳು ತೊಂದರೆಗೀಡಾಗುತ್ತಿದ್ದಾರೆ. ಕೂಡಲೇ ಬಸ್ ವ್ಯವಸ್ಥೆ ಮಾಡಬೇಕು. ಇಲ್ಲವಾದಲ್ಲಿ ಎನ್.ಎಸ್.ಯು.ಐ. ವತಿಯಿಂದ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಲಾಯಿತು.

ಈ ಸಂದರ್ಭದಲ್ಲಿ ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ವಿಜಯಕುಮಾರ್, ಕಾರ್ಯಧ್ಯಕ್ಷ ರವಿಕಾಟಿಕೆರೆ, ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ಚರಣ್ ,ವಿಕ್ರಂ ,ರವಿ ,ಅಜಯ್ ಅರಸ್ ,ವರುಣ್ ವಿ ಪಂಡಿತ್, ಕುಮಾರ್, ಅಶ್ವಥ್ ,ತೌಫಿಕ್, ಮಲಗೊಪ್ಪ ಶಿವು, ಗಿರಿ ,ಮುರುಳಿ, ರೋಹನ್ ,ಕಿರಣ ,ಇನ್ನು ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Ashika S

Recent Posts

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

4 mins ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

16 mins ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

39 mins ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

56 mins ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

1 hour ago

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

1 hour ago