News Karnataka Kannada
Friday, May 03 2024
ಶಿವಮೊಗ್ಗ

ಶಿವಮೊಗ್ಗ: ಅಪ್ರಾಪ್ತ ಬಾಲಕರ ಅಶ್ಲೀಲ ವೀಡಿಯೋ ಚಿತ್ರೀಕರಿಸಿದ್ದ ಆರೋಪಿ ಬಂಧನ

Shimoga: Man arrested for filming pornographic video of minor boys
Photo Credit : By Author

ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕರ ಅಶ್ಲೀಲ ವೀಡಿಯೋಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ ಹಿನ್ನೆಲೆ ಸೊರಬ ತಾಲ್ಲೂಕಿನ ತಿಮ್ಮಪ್ಪ (42 ವರ್ಷ)  ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಈ ಕುರಿತು ಸೈಬರ್ ಟಿಪ್ ಲೈನ್ ನಿಂದ ಬಂದ ದೂರಿನ ಮೇರೆಗೆ 12-01-2020 ರಂದು ಶಿವಮೊಗ್ಗ ಜಿಲ್ಲೆಯ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಮತ್ತು ಐಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಗುರುರಾಜ್‌, ಕೆ.ಟಿ, ಪಿಐ, ಸಿಇಎನ್‌ ಪೊಲೀಸ್‌ ಠಾಣೆರವರು ತನಿಖೆ ಕೈಗೊಂಡು ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ  ಹರಿಪ್ರಸಾದ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ನ್ಯಾಯಾಧೀಶರಾದ ಲತಾ ರವರು ದಿನಾಂಕ 30-09-2022 ರಂದು ಆರೋಪಿ ತಿಮ್ಮಪ್ಪ, 42 ವರ್ಷ, ಸೊರಬ ತಾಲ್ಲೂಕು ಈತನ ವಿರುದ್ಧ ಪೋಕ್ಸೋ ಮತ್ತು ಐಟಿ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಟ್ಟು 1,44,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 3 ವರ್ಷಗಳ ಕಾಲ ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು