ಶಿವಮೊಗ್ಗ: ಶಿವಮೊಗ್ಗದ ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ 37 ವರ್ಷದ ರೋಗಿಯು ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿದ್ದಾನೆ.
ಬುಧವಾರ (ಮಾ. 6) ರಂದು ಮಧ್ಯಾಹ್ನ ಭದ್ರಾವತಿ ತಾಲೂಕಿನ ಮಾರಶೆಟ್ಟಿಕೊಪ್ಪ ಗ್ರಾಮದ 37 ವರ್ಷದ ನಾಗರಾಜ್ ಉಸಿರಾಟ ತೊಂದರೆಯಿಂದ ಜಿಲ್ಲಾಸ್ಪತ್ರೆಗೆ ದಾಖಲು ಆಗಿದ್ದರು. ಇಂದು ಬೆಳಗ್ಗೆ ವಾರ್ಡ್ ನಿಂದ ಸ್ಕ್ಯಾನಿಂಗ್ ಮಾಡಲು ನಾಗರಾಜ್ ನನ್ನು ಕರೆದುಕೊಂಡು ಹೋಗುವ ಸಮಯದಲ್ಲಿ ಆರೋಗ್ಯದಲ್ಲಿ ಮತ್ತೆ ಏರುಪೇರು ಆಗಿದೆ. ಆತನ ಉಸಿರಾಟಕ್ಕೆ ತೊಂದರೆಯಾಗಿದೆ. ಈ ನಡುವೆ ಆತನಿಗೆ ಆಕ್ಸಿಜನ್ ಅಗತ್ಯವಿತ್ತು. ಆದ್ರೆ ಆ ಸಮಯದಲ್ಲಿ ಆತನಿಗೆ ಆಕ್ಸಿಜನ್ ಪೂರೈಕೆಯಾಗಿಲ್ಲ. ಈ ನಡುವೆ ಮತ್ತೆ ರೋಗಿಯನ್ನು ವಾರ್ಡ್ ಗೆ ಕರೆದುಕೊಂಡು ಹೋಗಿ ಆಕ್ಸಿಜನ್ ವ್ಯವಸ್ಥೆ ಮಾಡಿ ನಂತರ ಸ್ಕ್ಯಾನಿಂಗ್ ಕರೆದುಕೊಂಡು ಹೋಗಿದ್ದಾರೆ. ಆಗ ಆತನ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದರಿಂದ ಆತ ಮೃತಪಟ್ಟಿದ್ದಾನೆ. ಮೊದಲೇ ಆಕ್ಸಿಜನ್ ವ್ಯವಸ್ಥೆ ಮಾಡಿ ಸ್ಕ್ಯಾನಿಂಗ್ ಗೆ ಕರೆದುಕೊಂಡು ಹೋಗಿದ್ದರೆ ಜೀವ ಉಳಿಯುತ್ತಿತ್ತು. ಇದಕ್ಕೆ ಸಂಪೂರ್ಣ ಕಾರಣವೇ ವೈದ್ಯರ ನಿರ್ಲಕ್ಷ್ಯ. ಜಿಲ್ಲಾಸ್ಪತ್ರೆಯ ಅವ್ಯವಸ್ಥೆಗೆ ಮೃತನ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಜಿಲ್ಲಾ ಸರ್ಜನ್ ಸಿದ್ದನಗೌಡ ಅವರು ಘಟನೆ ಕುರಿತು ತನಿಖೆ ಮಾಡುವುದಾಗಿ ಮೃತರ ಕುಟುಂಬಸ್ಥರಿಗೆ ತಿಳಿಸಿದ್ದಾರೆ.