ಶಿವಮೊಗ್ಗ: ಭದ್ರಾವತಿ ತಾಲ್ಲೂಕಿನ ಗ್ರಾಮವೊಂದರ ವಾಸಿ ರಾಘವೇಂದ್ರ, ಈತನು 3 ವರ್ಷ 4 ತಿಂಗಳ ಅಪ್ರಾಪ್ತ ವಯ್ಯಸ್ಸಿನ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೊಂದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಕಲಂ 376 (ಎ & ಬಿ) ಐಪಿಸಿ ಮತ್ತು ಪೋಕ್ಸೋ ಕಾಯ್ದೆಯಡಿಯಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.
ಆಗಿನ ತನಿಖಾಧಿಕಾರಿಗಳಾದ ಶ್ರೀ ಮಂಜುನಾಥ್ ಇ ಓ, ಸಿಪಿಐ, ಭದ್ರಾವತಿ ಗ್ರಾಮಾಂತರ ವೃತ್ತ ರವರು ಪ್ರಕರಣದ ತನಿಖೆ ಕೈಗೊಂಡು ಸದರಿ ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಶ್ರೀ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, FTSC–II (POCSO)
ಶಿವಮೊಗ್ಗನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಮಾನ್ಯ ನ್ಯಾಯಾಧೀಶರಾದ ಮೋಹನ ಜೆ.ಎಸ್ ರವರು ದಿನಾಂಕ-17-10-2022 ರಂದು ಆರೋಪಿ ರಾಘವೇಂದ್ರ, 27 ವರ್ಷ, ಭದ್ರಾವತಿ ತಾಲ್ಲೂಕು ಈತನ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿತನಿಗೆ 20 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1,00,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿರುತ್ತಾರೆ.