News Karnataka Kannada
Thursday, May 02 2024
ಶಿವಮೊಗ್ಗ

ಶಿವಮೊಗ್ಗ: ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಪಡೆಯಲು ಅಧಿಕಾರಿಗಳ ಮನವಿ

Family welfare officer urges people to get covid booster dose of vaccine
Photo Credit : By Author

ಶಿವಮೊಗ್ಗ : ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯಾದ ಕೋವಿಶೀಲ್ಡ್ 47,500 ಹಾಗೂ ಕೋವ್ಯಾಕ್ಸಿನ್ 18,600 ಡೋಸ್ ಲಸಿಕೆಗಳು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ, ಜಿಲ್ಲಾ ತರಬೇತಿ ಸಂಸ್ಥೆ, ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿದ್ದು ಸಾರ್ವಜನಿಕರು ಪಡೆದುಕೊಳ್ಳಬೇಕು.

ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಎರಡು ಡೋಸ್ ಲಸಿಕೆ ಪಡೆದ ಫಲಾನುಭವಿಗಳು ಬೂಸ್ಟರ್ ಡೋಸ್ ಲಸಿಕೆಯನ್ನು ತಮ್ಮ ಹತ್ತಿರದ ಆರೋಗ್ಯ ಸಂಸ್ಥೆಗಳಲ್ಲಿ ಪಡೆಯಬೇಕು. ಬೂಸ್ಟರ್ ಡೋಸ್ ಲಸಿಕೆ ಪಡೆಯುವುದರಿಂದ ಮುಂದೆ ಬರಬಹುದಾದ ಕೋವಿಡ್-19 ಮಾರಣಾಂತಿಕ ರೋಗದಿಂದ ಪಾರಾಗಲು ಸಹಕಾರಿಯಾದ್ದರಿಂದ ಲಸಿಕೆಯನ್ನು ತಕ್ಷಣ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಹಾಗೂ ಆರ್‍ಸಿಹೆಚ್ ಅಧಿಕಾರಿ ಡಾ.ನಾಗರಾಜ್ ನಾಯ್ಕ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು