ಶಿವಮೊಗ್ಗ: ಕಾರು ನಿಯಂತ್ರಣ ತಪ್ಪಿ ಉರುಳಿ ಬಿದ್ದು ಓರ್ವ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮುಡುಬ ಬಳಿ ತಂದೆಯೊಬ್ಬರು ತಮ್ಮ ಮಗನನ್ನು ವಸತಿ ಶಾಲೆಗೆ ಸೇರಿಸಿ ಪತ್ನಿ ಹಾಗೂ ಮಗಳೊಂದಿಗೆ ವಾಪಸ್ ಬರುವಾಗ ನಿಯಂತ್ರಣ ತಪ್ಪಿದ ಕಾರು ಉರುಳಿ ಬಿದ್ದ ಪರಿಣಾಮ ತಂದೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ  ನಡೆದಿದೆ.

ಮೃತ ದುರ್ದೈವಿ ತರೀಕೆರೆಯ ವಕೀಲ ಸಂಪತ್ ಎಂಬವರು ತಮ್ಮ ಮಗನನ್ನು ಮೂಡುಬಿದರೆಯ ವಸತಿ ಶಾಲೆಗೆ ಸೇರಿಸಿ ಭಾನುವಾರದಂದು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಪಸ್ ಊರಿಗೆ ತೆರಳುತ್ತಿದ್ದರು.

ಮಧ್ಯಾಹ್ನದ ಸುಮಾರಿಗೆ ಮುಡಬ ಚೌಡೇಶ್ವರಿ ದೇವಸ್ಥಾನದ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಅಡಿಕೆ ತೋಟದಲ್ಲಿ ಮಗುಚಿ ಬಿದ್ದಿದೆ. ಇದರ ಪರಿಣಾಮ ಸಂಪತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಅವರ ಪತ್ನಿ ಹಾಗೂ ಮಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

Gayathri SG

Recent Posts

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

7 seconds ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

16 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

29 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

51 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

56 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

1 hour ago