ಶಿವಮೊಗ್ಗ: ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಹೆಣ್ಣುಮಕ್ಕಳಿಗೆ ಶಾಸಕ ಪ್ರಿಯಾಂಕ್ ಖರ್ಗೆ ಅವಮಾನ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಶಾಸಕ ಪ್ರಿಯಾಂಕ್ ಖರ್ಗೆ ಲಂಚ-ಮಂಚ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪ್ರಿಯಾಂಕ್ ಖರ್ಗೆ ಕ್ಷಮೆಯಿಲ್ಲದ ಅಕ್ಷಮ್ಯ ಅಪರಾಧ ಮಾಡಿದ್ದಾರೆ.
ಕೂಡಲೇ ಪ್ರಿಯಾಂಕ್ ಖರ್ಗೆ ಅವರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.