News Karnataka Kannada
Monday, April 29 2024
ಶಿವಮೊಗ್ಗ

ಶಿವಮೊಗ್ಗ: ಜನವರಿ 7 ರಿಂದ ರಾಜ್ಯಮಟ್ಟದ ಪ್ರತಿಭಾಕಾರಂಜಿ 

State-level pratibhakaranji from January 7 
Photo Credit : By Author

ಶಿವಮೊಗ್ಗ: ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವನ್ನು 2023ರ ಜನವರಿ 7, 08 ಮತ್ತು 09ರಂದು ನಗರದ ಕುವೆಂಪು ಶಿವಮೊಗ್ಗದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು.

ಈ ಸಂಬಂಧ ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರತಿಭಾ ಕಾರಂಜಿಯ ಲಾಂಛನ ಹಾಗೂ ಜಾಲತಾಣ ಲೋಕಾರ್ಪಣೆಗೊಳಿಸಿ ಮಾಧ್ಯಮದ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು.

ಶಿಕ್ಷಣ ಕ್ಷೇತ್ರದಲ್ಲಿ ಕಲೆಗಳನ್ನು ಉತ್ತೇಜಿಸುವ, ಶಾಲಾ ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆ, ಸೃಜನಾತ್ಮಕ ಕೌಶಲ್ಯಗಳನ್ನು ಹೊರತರಲು ಇದೊಂದು ಉತ್ತಮ ವೇದಿಕೆ ಇದಾಗಿರಲಿದೆ ಎಂದರು.

ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ನಡೆಸಲಾದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವದಲ್ಲಿ ಸ್ಥಾನ ಪಡೆದ 1375ಕ್ಕೂ ಹೆಚ್ಚಿನ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ರೀತಿಯ 23 ವೈಯಕ್ತಿಕ ವಿಭಾಗಗಳಲ್ಲಿ ಹಾಗೂ 03 ಸಾಮೂಹಿಕ ವಿಭಾಗದಲ್ಲಿ ಭಾಗವಹಿಸಲಿದ್ದಾರೆ. ಎಂದ ಅವರು ಪ್ರತಿಭಾ ಕಾರಂಜಿಯ ಉದ್ಘಾಟನಾ ಕಾರ್ಯಕ್ರಮವು ಜನವರಿ 07ರಂದು ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ. ಉಳಿದಂತೆ ಪ್ರತಿಭಾಕಾರಂಜಿಯ ಏಕರೀತಿಯ ಸಾಂಸ್ಕøತಿಕ ಸ್ಪರ್ಧೆಗಳು ಡಿ.ವಿ.ಎಸ್.ಕಾಲೇಜಿನ ವಿವಿಧ ಕೊಠಡಿಗಳಲ್ಲಿ ನಡೆಯಲಿವೆ ಎಂದರು.

ಸ್ಪರ್ಧೆಗಳಿಗೆ ತಜ್ಞ ಹಾಗೂ ಪರಿಣಿತಿ ಹೊಂದಿರುವ ಜಿಲ್ಲೆಯ ಹಾಗೂ ಹೊರ ಜಿಲ್ಲೆಗಳಿಂದ 150ಕ್ಕೂ ಹೆಚ್ಚಿನ ತೀರ್ಪುಗಾರರನ್ನು ನಿಯೋಜಿಸಲಾಗಿದೆ ಅದರ ಯಶಸ್ಸಿಗಾಗಿ ಹಾಗೂ ವ್ಯವಸ್ಥಿತ ನಿರ್ವಹಣೆಗಾಗಿ ವಿವಿಧ 19ಸಮಿತಿಗಳನ್ನು ರಚಿಸಲಾಗಿದ್ದು, ಅದರ ಮೇಲ್ವಿಚಾರಣೆಗಾಗಿ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಥಮ ಸ್ಥಾನ ರೂ.6,000/, ದ್ವಿತೀಯ ಸ್ಥಾನ ರೂ.4,000/- ಹಾಗೂ ತೃತೀಯ ಸ್ಥಾನ ರೂ.2,000/-ಗಳ ನಗದು ಪುರಸ್ಕಾರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು. ಆಗಮಿಸಿದ ಕ್ರೀಡಾಪಟುಗಳಿಗೆ ಉತ್ತಮ ಊಟ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದ್ದು, ನಗರದಲ್ಲಿ ಸುಮಾರು 13ಸ್ಥಳಗಳನ್ನು ಗುರುತಿಸಲಾಗಿದೆ ಎಂದರು.

ಶಿಷ್ಟಾಚಾರದಂತೆ ಈ ಕಾರ್ಯಕ್ರಮದ ಉದ್ಘಾಟನೆಗೆ ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಗಣ್ಯರನ್ನು ಆಹ್ವಾನಿಸಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ.ಪ್ರಕಾಶ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ, ಲೋಕೇಶ್ವರಪ್ಪ, ರಾಮಪ್ಪಗೌಡ ಸೇರಿದಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು