ಶಿವಮೊಗ್ಗ

ಶಿವಮೊಗ್ಗ: ಅಂಧ ಯುವಕನ ಮೇಲೆ ಹರಿದ ರೈಲು

ಶಿವಮೊಗ್ಗ: ರೈಲು ಹಳಿ ದಾಟುವಾಗ ಅಂಧ ಯುವಕನೋರ್ವ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಿನ್ನೆ ನಡೆದಿದೆ.

ನಿನ್ನೆ ಮಧ್ಯಾಹ್ನ 1 ಗಂಟೆಯ ಶಿವಮೊಗ್ಗ-ಬೆಂಗಳೂರು ಡೆಮೋ ರೈಲು ಮಧ್ಯಾಹ್ನ 1-30 ಕ್ಕೆ ಭದ್ರಾವತಿಯ ಹುತ್ತಾ ಕಾಲೋನಿಯ ಬಳಿ ಚಲಿಸುವಾಗ ಹಳಿ ದಾಟುತ್ತಿದ್ದ 34 ವರ್ಷದ ಯುವಕನ ಮೇಲೆ ಹರಿದು ಹೋಗಿದೆ.

ರೈಲಿಗೆ ಸಿಲುಕಿ ಸಾವನ್ನಪ್ಪಿದ ಯುವಕನನ್ನ ಮಹೇಶ್ ಎಂದು ಗುರುತಿಸಲಾಗಿದೆ. ಮಹೇಶ್ ಗೆ ಕಣ್ಣು ಕಾಣಿಸುತ್ತಿರಲಿಲ್ಲ. ಕಿವಿ ಸಹ ಮಂದವಾಗಿತ್ತು ಎಂದು ಹೇಳಲಾಗುತ್ತಿದೆ. ಈತ ಉಜ್ಜೈನಿಪುರದ 8 ನೇ ತಿರುವಿನ ನಿವಾಸಿಯಾಗಿದ್ದಾನೆ. ಈತ ಯಾಕೆ ಇಲ್ಲಿಗೆ ಬಂದಿದ್ದ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ರೈಲು ಬರುವುದು ಕಾಣಿಸದೆ, ಶಬ್ದವೂ ಕೇಳಿಸದೆ ಇದ್ದುದ್ದರಿಂದ ಮಹೇಶ್ ದುರಂತ ಸಾವಿಗೆ ಸಾಕ್ಷಿಯಾಗಿದ್ದಾನೆ. ಆತ ಯಾರ ಸಹಾಯವಿಲ್ಲದೆ ಯಾಕೆ ಬಂದ ಎಂಬುದು ತಿಳಿದುಬಂದಿಲ್ಲ. ಆತನ ಕುಟುಂಬಕ್ಕೆ ಮೃತ ದೇಹವನ್ನ ಹಸ್ತಾಂತರಿಸಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Gayathri SG

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

4 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

27 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

43 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago