ಶಿವಮೊಗ್ಗ: ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವದ ದಿನದಂದೆ ಶಿವಮೊಗ್ಗದಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಗಾಂದಿ ಬಜಾರ್ ನಲ್ಲಿ ಪ್ರೇಮ್ ಸಿಂಗ್ ಓರ್ವನಿಗೆ ಚಾಕು ಇರಿದ ಬೆನ್ನಲ್ಲೇ ಅಶೋಕ ನಗರದಲ್ಲಿ ಮತ್ತೋರ್ವನಿಗೆ ಚಾಕುವಿನಿಂದ ಇರಿಯಲಾಗಿದೆ.
ಅಶೋಕ್ ನಗರದಲ್ಲಿ ಪ್ರವೀಣ್ ಕುಮಾರ್ 27 ವಯಸ್ಸಿನ ಯುವಕನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ.
144 ಸೆಕ್ಷನ್ ಜಾರಿ
144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ದಿನಾಂಕ 16/08/2022 ರಂದು ರಜೆ ಘೋಷಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ತಿಳಿಸಿದ್ದಾರೆ.