News Karnataka Kannada
Friday, May 10 2024
ಶಿವಮೊಗ್ಗ

ಶಿವಮೊಗ್ಗ: ನಾನು ರಾಜಕೀಯದಿಂದ ನಿವೃತ್ತಿಯಾಗಿಲ್ಲ- ಬಿಎಸ್ ವೈ ಸ್ಪಷ್ಟನೆ

Shivamogga: I have not retired from politics, says BSY
Photo Credit : By Author

ಶಿವಮೊಗ್ಗ: ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಮಾಧ್ಯಮಗಳಿಗೆ ಮಾತನಾಡಿದ, ಬಿ ಎಸ್ ಯಡಿಯೂರಪ್ಪ ನಾನು ಅಧಿವೇಶನದಲ್ಲಿ ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದೆ. ಹಾಗೆಂದರೆ ರಾಜಕಾರಣದಿಂದ ದೂರ ಉಳಿಯುವುದಲ್ಲ. ರಾಜಕಾರಣದಲ್ಲಿ ಇದ್ದುಕೊಂಡೇ ಪಕ್ಷ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ. ಇದರ ಬಗ್ಗೆ ಯಾವುದೇ ಸಂಶಯವಿಲ್ಲ. ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ.ವಿದಾಯದ ಬಳಿಕ ಕೆಲವರು ನಾನು ಚುನಾವಣೆಗೆ ನಿಲ್ಲಬೇಕು ಎಂದು ಹೇಳಿರುವ ವಿಚಾರದ ಬಗ್ಗೆ ಮಾತನಾಡಿದ ಬಿಎಸ್ ವೈ ನನಗೆ 70 ವರ್ಷ ದಾಟಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ನಾನು ಮಾಡಿದ್ದೇನೆ ಎಂದರು.

ಮತ್ತೊಬ್ಬರಿಗೆ ಅವಕಾಶ ಸಿಗಬೇಕೆಂಬ ನಿಟ್ಟಿನಲ್ಲಿ ಈ ತೀರ್ಮಾನ ಮಾಡಿದ್ದೇನೆ. ಇದು ಹೊರತುಪಡಿಸಿದರೆ, ಬೇರೆನೂ ಕಾರಣವಿಲ್ಲ. ನಾನು ಚುನಾವಣೆ ನಿಲ್ಲದೇ ಇರಬಹುದು.ಆದರೆ, ನಾನು ಸಕ್ರೀಯ ರಾಜಕಾರಣದಲ್ಲಿದ್ದು, ಪಕ್ಷವನ್ನು ಅಧಿಕಾರದಲ್ಲಿ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚುನಾವಣೆಗೆ ನಿಲ್ಲಬೇಕೆಂದು ಬಿಜೆಪಿಯವರು ಮಠಾಧೀಶರನ್ನು ಭೇಟಿಯಾಗಿದ್ದಾರೆಂಬ ವಿಚಾರದ ಬಗ್ಗೆಯೂ ಉತ್ತರಿಸಿದ ಬಿಎಸ್ ವೈ ನಾನು ಯಾವ ಮಠಾಧೀಶರನ್ನು ಈ ಹಿನ್ನೆಲೆಯಲ್ಲಿ ಭೇಟಿಯಾಗಿಲ್ಲ. ಮಠಾಧೀಶರನ್ನು ಚುನಾವಣೆಗೆ ನಿಲ್ಲಲು ನಾನು ಯಾರ ಬಳಿಯೂ ಪ್ರಸ್ತಾಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ನಾಡಿದ್ದು ಸೋಮವಾರ ಉದ್ಘಾಟನೆಗೊಳ್ಳುತ್ತಿರುವ ಶಿವಮೊಗ್ಗ ಏರ್ ಪೋರ್ಟ್ ಗೆ ಪ್ರಧಾನಿ ಮೋದಿಯವರು ಲೋಕಾರ್ಪಣೆ ಮಾಡುತ್ತಿರುವುದು ಖುಷಿ ತಂದಿದೆ. 449 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. ಎಲ್ಲರೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಂತ ರೀತಿಯಲ್ಲಿ ಭಾಗಿಯಾಗಿ ಎಂದು ಜನತೆಯಲ್ಲಿ ಮನವಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು