ಶಿವಮೊಗ್ಗ: ಪ್ರಮುಖ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಕೆಪಿಸಿಸಿ ಕಾರ್ಯದರ್ಶಿ ಹುದ್ದೆಯಲ್ಲಿರುವ ಅವರು ಸಾಗರ ಕ್ಷೇತ್ರದಿಂದ ಟಿಕೇಟ್ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಟಿಕೇಟ್ ಘೋಷಣೆ ಮಾಡಿದ್ದು, ಹೀಗಾಗಿ ಪಕ್ಷದ ಚಟುವಟಿಕೆಗಳಿಂದ ರಾಜನಂದಿನಿ ಅಂತರ ಕಾಯ್ದುಕೊಂಡಿದ್ದರು.
ಬುಧವಾರ ಬೆಂಗಳೂರಿನಲ್ಲಿ ರಾಜನಂದಿನಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.