News Karnataka Kannada
Saturday, May 11 2024
ಶಿವಮೊಗ್ಗ

ಶಿವಮೊಗ್ಗ: ಸರ್ಕಾರಿ ಗೌರವದೊಂದಿಗೆ ಕೇಶವಮೂರ್ತಿಯವರ ಅಂತ್ಯಕ್ರಿಯೆ

Shivamogga: Keshavamurthy cremated with state honours
Photo Credit : By Author

ಶಿವಮೊಗ್ಗ, ಡಿ.22: ಡಿಸೆಂಬರ್ 21 ರಂದು ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ ಪ್ರಸಿದ್ದ ಗಮಕ ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹೆಚ್.ಆರ್.ಕೇಶವಮೂರ್ತಿ(88) ಇವರ ಅಂತ್ಯಕ್ರಿಯೆಯು ಇಂದು ಹೊಸಹಳ್ಳಿಯಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿತು.

ಮೃತರ ಗೌರವಾರ್ಥ ಸರ್ಕಾರ, ಸರ್ಕಾರಿ ಗೌರವದೊಂದಿಗೆ ಅಂತಿಮ ಕ್ರಿಯೆ ನಡೆಸಲು ಆದೇಶಿಸಿರುವನ್ವಯ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಕುಮಾರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಮಹಾನಗರಪಾಲಿಕೆ ಮಹಾಪೌರ ಶಿವಕುಮಾರ್ ಸೇರಿದಂತೆ ಇತರೆ ಗಣ್ಯರು ಪಾರ್ಥೀವ ಶರೀರಕ್ಕೆ ಪುಷ್ಪಮಾಲೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ನಂತರ ಶಿಷ್ಟಾಚಾರದಂತೆ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಈ ವೇಳೆ ಮೃತರ ಪತ್ನಿ, ಪುತ್ರಿ, ಬಂಧುಗಳು, ವಿಪ್ರ ಸಮಾಜದ ಮುಖಂಡರು, ಸಾರ್ವಜನಿಕರು, ಜನಪ್ರತಿನಿಧಿಗಳು, ಅಧಿಕಾರಿಗಳು, ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು