ಶಿವಮೊಗ್ಗ: ಒಂದು ದಿನದ ಶಿಶುವನ್ನು ಜೀರೋ ಟ್ರಾಫಿಕ್ನಲ್ಲಿ ದಾವಣಗೆರೆ ಆಸ್ಪತ್ರೆಯಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಮಗುವಿಗೆ ವೈದ್ಯರು ವಿಶೇಷ ಆರೈಕೆ ಮಾಡುತ್ತಿದ್ದಾರೆ.
ದಾವಣಗೆರೆಯ ಹಾಲೇಶ್ ಎಂಬುವವರ ಮಗು ಹುಟ್ಟುವಾಗಲೇ ಅನಾರೋಗ್ಯಕ್ಕೀಡಾಗಿತ್ತು. ಈ ಹಿನ್ನೆಲೆ ತುರ್ತಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಬೇಕಿತ್ತು. ಮಗುವಿನ ಅನಾರೋಗ್ಯ ವಿಚಾರ ತಿಳಿಯುತ್ತಿದ್ದಂತೆ ಎರಡು ಜಿಲ್ಲೆಯ ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದರು.
ದಾವಣಗೆರೆಯ ಚಿಟಗೇರಿ ಆಸ್ಪತ್ರೆಯಿಂದ ಮಗುವನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯ ಏಜೆಂಲ್ಸ್ ಮಕ್ಕಳ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲಾ ಪೊಲೀಸರು ಮಗು ಇದ್ದ ಆಂಬುಲೆನ್ಸ್ಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದರು.