ಶಿವಮೊಗ್ಗ: ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಧಿಕಾರಕ್ಕೇರಲು ಹರಸಾಹಸ ಮಾಡುತ್ತಿದ್ದಾರೆ, ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, ಸಿದ್ದರಾಮೋತ್ಸವ ಮುಂದಿನ ಚುನಾವಣೆಗೆ ಇದು ಕಸರತ್ತು. ಈ ಉತ್ಸವ ಮುಗಿಯುತ್ತಿದ್ದಂತೆ ಕಾಂಗ್ರೆಸ್ ಸರ್ಕಸ್ಗಳೇನೇನಾಗುತ್ತೆ ನೋಡುತ್ತಾ ಇರಿ. ಹುಟ್ಟುಹಬ್ಬವನ್ನು ಅಷ್ಟು ಅದ್ಧೂರಿಯಾಗಿ ಆಚರಿಸುವ ಅವಶ್ಯಕತೆ ಏನಿದೆ, ಅಭಿಮಾನಿಗಳ ಹೆಸರಿನಲ್ಲಿ ಮೈಲೇಜ್ ಪಡೆಯಲು ಯತ್ನಿಸುತ್ತಿರುವ ಸಿದ್ದರಾಮಯ್ಯ ಈ ಕಾರ್ಯಕ್ರಮಕ್ಕೆ 75 ಕೋಟಿ ಹಣ ಖರ್ಚು ಮಾಡಬೇಕೆ ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ಖಂಡಿತವಾಗಿಯೂ ಮುಸ್ಲಿಂ ಪ್ರಾಬಲ್ಯವಿರುವ ಸ್ಥಳದಿಂದ ಚುನಾವಣೆಗೆ ಸ್ಪರ್ಧಿಸುತ್ತಾರೆ ಇಲ್ಲದಿದ್ದಾರೆ ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಹೇಳಿದ್ದಾರೆ.