News Karnataka Kannada
Saturday, April 13 2024
Cricket
ಶಿವಮೊಗ್ಗ

ಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ಕುಡಿಯುವ ನೀರನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಿ- ಮಧು ಬಂಗಾರಪ್ಪ

Take necessary steps to provide drinking water to the residents of rural areas: Madhu Bangarappa
Photo Credit : News Kannada

ಶಿವಮೊಗ್ಗ, ಜೂ.27: ಜಿಲ್ಲೆಯಲ್ಲಿ ವಾಡಿಕೆ ಪ್ರಮಾಣದ ಮಳೆ ಕೊರತೆಯ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ಕೊರತೆ ಉಂಟಾಗಿದ್ದು, ನೀರಿನ ಕೊರತೆಯನ್ನು ನೀಗಿಸಲು ಸ್ಥಳೀಯ ಜಲಮೂಲಗಳನ್ನು ಬಳಸಿಕೊಳ್ಳುವಂತೆ ಹಾಗೂ ಅಗತ್ಯವಿರುವಲ್ಲಿ‌ ಟ್ಯಾಂಕರ್ ಗಳ ಮೂಲಕ ನೀರನ್ನು ಸರಬರಾಜು ಮಾಡುವಂತೆ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಎಸ್.ಬಂಗಾರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ತೀರ್ಥಹಳ್ಳಿಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಪ್ರಸಕ್ತ ಸಾಲಿನ ಶಿಕ್ಷಕರ ವರ್ಗಾವಣೆಗೆ ಸುಮಾರು 87000 ಶಿಕ್ಷಕರು ಅರ್ಜಿ ಸಲ್ಲಿಸಿದ್ದು , ಅದರಲ್ಲಿ 25000 ಶಿಕ್ಷಕರು ವರ್ಗಾವಣೆ ಯಾಗಲಿದ್ದಾರೆ. ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಅಡಚಣೆಯಾಗದಂತೆ ಈ ಪ್ರಕ್ರಿಯೆ ನಡೆಯಲಿದೆ ಎಂದರು.

ರಾಜ್ಯದಲ್ಲಿ ಸುಮಾರು 57000 ಶಿಕ್ಷಕರ ಹುದ್ದೆ ಖಾಲಿ‌ ಇದ್ದು, ತಕ್ಷಣದ ಕ್ರಮವಾಗಿ ಹಾಗೂ ನ್ಯಾಯಾಲಯದ ಸೂಚನೆಯಂತೆ 13000 ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗಿದೆ ಎಂದರು.

ಈ ಶಿಕ್ಷಕರ ನೇಮಕಾತಿಯಲ್ಲಿ ಅತಿ ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು ನೇಮಕಗೊಳ್ಳುತ್ತಿರುವುದು ವಿಶೇಷ. ಅಲ್ಲದೆ ಶಿಕ್ಷಕರ ಕೊರತೆಯನ್ನು ನೀಗಿಸಲು ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.

ಗ್ರಾಮೀಣ ಶಾಲೆಗಳ ಸಮಸ್ಯೆಯನ್ನು ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅಲ್ಲಿನ ಪೋಷಕರು ಹಾಗೂ ಜನಪ್ರತಿನಿಧಿಗಳ ಸಹಕಾರದಿಂದ ಮತ್ತು ಅಧಿಕಾರಿಗಳ ಸಲಹೆ ಪಡೆದು ಸರಿಪಡಿಸಲು ಯತ್ನಿಸಲಾಗುವುದು ಎಂದರು.

ಮಳೆಹಾನಿ ಸಂದರ್ಭಗಳಲ್ಲಿ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಮಾನವೀಯ ನೆಲೆಯಲ್ಲಿ ಸಂತ್ರಸ್ಥರ ನೆರವಿಗೆ ಧಾವಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಯಾವುದೆ ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ, ಬಿಸಿಯೂಟ ಕಾರ್ಯಕ್ರಮ ಅನುಷ್ಠಾನದಲ್ಲಿ ಸ್ವಚ್ಚತೆ ಕಾಪಾಡುವಂತೆ ಶಿಕ್ಷಣಾಧಿಕಾರಿಗಳಿಗೆ‌ ಸೂಚಿಸಿದ ಸಚಿವರು ಅರಣ್ಯಭೂಮಿಯಲ್ಲಿ ರೈತರು ಬೆಳೆದ ಬೆಳೆಯನ್ನು ನಾಶಪಡಿಸದಂತೆ ಹಾಗೂ ಅವರನ್ನು ಒಕ್ಕಲೆಬ್ಬಿಸದಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು