ಹೆಣ್ಣು ಮರಿಗೆ ಜನ್ಮ ನೀಡಿದ ಜಂಬೂ ಸವಾರಿಯಲ್ಲಿ ಭಾಗವಹಿಸಲು ಬಂದಿದ್ದ ಆನೆ

ಶಿವಮೊಗ್ಗ: ಜಂಬೂ ಸವಾರಿಯಲ್ಲಿ ಭಾಗವಹಿಸಲು ಬಂದಿದ್ದ ನೇತ್ರಾವತಿ ಆನೆ ಮರಿ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗದ ಕೋಟೆ ರಸ್ತೆಯ ವಾಸವಿ ಶಾಲೆ ಆವರಣದಲ್ಲಿ ಆನೆ ಹೆಣ್ಣು ಮರಿಗೆ ಜನ್ಮ ನೀಡಿದೆ.

28 ವರ್ಷದ ನೇತ್ರಾವತಿ ಜಂಬೂ ಸವಾರಿಯಲ್ಲಿ ಭಾಗವಹಿಸಲು ಬಂದಿತ್ತು. ಸಕ್ರೇಬೈಲು ಆನೆ ಬಿಡಾರದಿಂದ ಆಗಮಿಸಿತ್ತು. ಇಂದು ದಸರಾ ಮೆರವಣಿಗೆಯಲ್ಲಿ ಭಾಗವಹಿಸಲು ಬಂದಿತ್ತು. ಇದೀಗ ನೇತ್ರಾವತಿ ಆನೆ 5ನೇ ಬಾರಿ ಮರಿ ಹಾಕಿದೆ. ಸದ್ಯ ಬಾಣಂತಿ ಆನೆಯ ಆರೈಕೆಯಲ್ಲಿ ಮಾವುತರು, ಕಾವಾಡಿಗರು ತೊಡಗಿದ್ದಾರೆ. ಇನ್ನು ನಿನ್ನೆ ರಾತ್ರಿ ನೇತ್ರಾವತಿ ಆನೆ ಹೆಣ್ಣು ಮರಿಗೆ ಜನ್ಮ ನೀಡಿದ ಬೆನ್ನಲ್ಲೇ ನೇತ್ರಾವತಿ ಮತ್ತು ಮರಿಯನ್ನ ಸಕ್ರೆಬೈಲಿಗೆ ಕಳುಹಿಸಲಾಗಿದೆ.

ಆದರೆ ಜಂಬೂ ಸವಾರಿಯನ್ನ ಹೇಮಾವತಿ ಮತ್ತು ನೇತ್ರಾವತಿಯ ನಡುವೆ ಸಾಗರ ಹೋರಬೇಕಿತ್ತು. ಎರಡು ಹೆಣ್ಣು ಆನೆಗಳ ಮಧ್ಯೆ ಗಂಡಾನೆ ಸರಾಗವಾಗಿ ಬಾರ ಹೋರಲಿದ್ದಾನೆ ಎಂದು ಅಂದಾಜಿಸಲಾಗಿತ್ತು. ಆದರೆ ಒಂದು ಆನೆ ವಾಪಾಸ್ ಸಕ್ರೆಬೈಲಿಗೆ ಹೋಗಿದ್ದರಿಂದ ಈ ತೀರ್ಮಾನ ಅನಿವಾರ್ಯವಾಗಿದೆ.

ಈ ಬೆನ್ನಲ್ಲೇ ಶಾಸಕ ಚೆನ್ನಬಸಪ್ಪ ನವರ ನೇತೃತ್ವದಲ್ಲಿ ಪಾಲಿಕೆ ಆಯುಕ್ತ ಮಾಯಣ್ಣಗೌಡ, ಅರಣ್ಯ ಅಧಿಕಾರಿ ಪ್ರಸನ್ನ ಪಟೇಗಾರ್ ನೇತೃತ್ವದಲ್ಲಿ ಸಭೆ ನಡೆಸಿ ಅಲಂಕೃತ ವಾಹನದ ಮೇಲೆ ಚಾಮುಂಡೇಶ್ವರಿಯ ವಿಗ್ರಹವನ್ನ ಇರಿಸಿ ವಾಹನದ ಮುಂಭಾಗದ ಎರಡು ಆನೆಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ.

ಮಧ್ಯಾಹ್ನ 2-30ಬರ ಸಮಯದಲ್ಲಿ ಜಂಬೂ ಸವಾರಿಯ ಮೆರವಣಿಗೆ ವಾಸವಿ ಶಾಲೆಯಿಂದ ಹೊರಡಲಿದೆ. ಅಲಂಕೃತ ವಾಹನದ ಮೇಲೆ ಜಂಬೂ ಸವಾರಿ ನಡೆಯಲಿದೆ.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

5 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago