News Karnataka Kannada
Monday, April 29 2024
ಶಿವಮೊಗ್ಗ

ಹಾವೇರಿಯಲ್ಲಿ ಈಶ್ವರಪ್ಪ ಪುತ್ರನಿಗೆ ಟಿಕೆಟ್ ನೀಡಬೇಕೆಂದು ಆಗ್ರಹ

ನಗರದ ಬಿಹೆಚ್ ರಸ್ತೆಯಲ್ಲಿರುವ ಗಾಯಿತ್ರಿ ಮಾಂಗಲ್ಯ ಮಂದಿರದಲ್ಲಿ ವಿಪ್ರ ಸ್ನೇಹ ಬಳಗದ ಸಮ್ಮೇಳನದಲ್ಲಿ ಕಾಂತೇಶ್ ಅಭಿಮಾನಿಗಳ ಬಳಗ ಲಗ್ಗೆ ಇಟ್ಟಿದೆ. ಕಾಂತೇಶ್ ಗೆ ಟಿಕೆಟ್ ತಪ್ಪಿದರೆ ಮುಂದಿನ ಹೆಜ್ಜೆಯ ಬಗ್ಗೆ ಸಚಿವ ಪ್ರಹ್ಲಾದ್ ಜೋಶಿಗೆ ವಿವರಿಸಿದ್ದಾರೆ.
Photo Credit : News Kannada

ಶಿವಮೊಗ್ಗ: ನಗರದ ಬಿಹೆಚ್ ರಸ್ತೆಯಲ್ಲಿರುವ ಗಾಯಿತ್ರಿ ಮಾಂಗಲ್ಯ ಮಂದಿರದಲ್ಲಿ ವಿಪ್ರ ಸ್ನೇಹ ಬಳಗದ ಸಮ್ಮೇಳನದಲ್ಲಿ ಕಾಂತೇಶ್ ಅಭಿಮಾನಿಗಳ ಬಳಗ ಲಗ್ಗೆ ಇಟ್ಟಿದೆ. ಕಾಂತೇಶ್ ಗೆ ಟಿಕೆಟ್ ತಪ್ಪಿದರೆ ಮುಂದಿನ ಹೆಜ್ಜೆಯ ಬಗ್ಗೆ ಸಚಿವ ಪ್ರಹ್ಲಾದ್ ಜೋಶಿಗೆ ವಿವರಿಸಿದ್ದಾರೆ.

ಹಾವೇರಿ ಗದಗ ಲೋಕಸಭಾ ಚುನಾವಣೆಯಲ್ಲಿ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಕೊಡಬೇಕೆಂದು ಬಿಎಸ್ ವೈ ಮನೆಗೆ ಹೋಗಿ ಮನವಿ ಮಾಡಿಕೊಂಡು ಬಂದ ಅಭಿಮಾನಿಗಳು ವಿಪ್ರ ಸಮ್ಮೇಳನದಕ್ಕೂ ಬಂದು ಸಚಿವರನ್ನ ಭೇಟಿ ಮಾಡಿದ್ದಾರೆ. ಭಾಗಿಯಾದ ಸಚಿವ ಪ್ರಹ್ಲಾದ್ ಜೋಶಿ ಅವರು ಕಾರ್ಯಕ್ರಮದಿಂದ ಹೊರಬರುತ್ತಿದ್ದಂತೆ ಅಭಿಮಾನಿಗಳು ಭೇಟಿ ನೀಡಿ ಬೇಡಿಕೆ ಇಟ್ಟಿದ್ದಾರೆ.

ಹಾವೇರಿಯಲ್ಲಿ ಕಾಂತೇಶ್ ಗೆ ಟಿಕೇಟ್ ನೀಡಬೇಕು. ನೀಡದಿದ್ದರೆ ಶಿವಮೊಗ್ಗ ಜಿಲ್ಲೆಯಲ್ಲಿ ಕೆ.ಎಸ್.ಈಶ್ವರಪ್ಪ ಮತ್ತು‌ ಪುತ್ರ ಕಾಂತೇಶ್ ಅವರನ್ನ ಸ್ವಾತಂತ್ರ್ಯ ಅಭ್ಯರ್ಥಿಯಾಗಿ ನಿಲ್ಲಿಸಿ ಗೆಲ್ಲಿಸಿಕೊಂಡು ಬರುವುದಾಗಿ ಅಭಿಮಾನಿಗಳು ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಮಾಜಿ ಡಿಸಿಎಂ ಈಶ್ವರಪ್ಪ ಮತ್ತು ಪುತ್ರ ಕಾಂತೇಶ್ ಹೇಗೆ ಸ್ಪಂಧಿಸುತ್ತಾರೆ ಕಾದು ನೋಡಬೇಕಿದೆ.

ಬೇಕೆ ಬೇಕು ಟಿಕೆಟ್ ಬೇಕು ಎಂದು ಘೋಷಣೆ ಕೂಗಿದ್ದಾರೆ. ಪಕ್ಷ ಹಾಳಾಗುತ್ತಿರುವ ಬಗ್ಗೆ ಎಚ್ಚರಿಕೆ ಸಹ ಕಾಂತೇಶ್ ಬೆಂಬಲಿಗರು ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು