ಶಿವಮೊಗ್ಗ: ಹೊಸನಗರ ತಾಲೂಕಿನ ಎಂ.ಗುಡ್ಡೆಕೊಪ್ಪ ಬಳಿಟಿಪ್ಪರ್ ಲಾರಿ ಮತ್ತು ಓಮಿನಿ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಈ ಅಪಘಾತದಲ್ಲಿ ಓಮಿನಿ ಕಾರಿನಲ್ಲಿದ್ದ 6 ಮಕ್ಕಳು ಸೇರಿದಂತೆ 12 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೊಸನಗರದಿಂದ ಶಿವಮೊಗ್ಗ ಮಾರ್ಗದ ಕಡೆ ತೆರಳುತ್ತಿದ್ದ ಓಮಿನಿ ಕಾರು ಹಾಗೂ ಅದೇ ಮಾರ್ಗದಲ್ಲಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟಿಪ್ಪರ್ ಲಾರಿ ಎರಡು ಮುಖಾಮುಖಿಯಾಗಿ ಡಿಕ್ಕಿಯಾಗಿವೆ.
ಓಮಿನಿ ಚಾಲಕನಿಗೆ ಗಂಭೀರವಾಗಿ ಗಾಯಗೊಂಡಿದ್ದರಿಂದ ಆತನನ್ನು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.