News Karnataka Kannada
Sunday, May 19 2024
ಶಿವಮೊಗ್ಗ

2ನೇ ಹಂತದ ಲೋಕಸಭೆ ಚುನಾವಣೆ: ಮತ ಚಲಾಯಿಸಿದ ಬಿಎಸ್​ ವೈ

ವೊತೆ
Photo Credit : NewsKarnataka

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಬಿಎಸ್​ ಯಡಿಯೂರಪ್ಪ, ಕರ್ನಾಟಕದಲ್ಲಿ 25ರಿಂದ 26 ಸ್ಥಾನದಲ್ಲಿ ಗೆಲ್ಲುತ್ತೇವೆ. ದೇಶದ ಜನ ಮೋದಿ ಮತ್ತೆ ಪ್ರಧಾನಿ ಆಗಬೇಕೆಂದು ಬಯಸಿದ್ದಾರೆ. ದೇಶದಲ್ಲಿ ಈ ಬಾರಿ ನಾವು 400ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದರು.

ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರದಲ್ಲಿ ಮತದಾನ ಆರಂಭವಾಗಿದೆ. ಮತಗಟ್ಟೆಯ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಜನ ಮತದಾನ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು