ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನವವಿವಾಹಿತೆ ಒಬ್ಬರು ನೇಣಿಗೆ ಕೊರಳೊಡ್ಡಿದ ಘಟನೆ ನಡೆದಿದೆ.
ಈಕೆ ತಾನು ಪ್ರೀತಿಸಿದ ಯುವಕನನ್ನೇ ಕಳೆದ 8 ತಿಂಗಳ ಹಿಂದೆ ವಿವಾಹವಾಗಿದ್ದಳು. ಮೃತಪಟ್ಟ ನವವಿವಾಹಿತೆಯನ್ನು ಶಮಿತಾ (24) ಎಂದು ಗುರುತಿಸಲಾಗಿದೆ.
ರಾತ್ರಿ ಮಲಗಲು ಕೊಠಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದಿದೆ. ಪತಿ ರಾತ್ರಿ ಪಾಳಿ ಕೆಲಸಕ್ಕೆ ತೆರಳಿದ್ದರು. ಮನೆಯಲ್ಲಿ ಪತಿಯ ತಂದೆ, ತಾಯಿ ಇದ್ದರು. ಕೊಠಡಿಯಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿಟ್ಟಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821