News Karnataka Kannada
Monday, April 29 2024
ಶಿವಮೊಗ್ಗ

ಮಂಗನ ಕಾಯಿಲೆಗೆ ಯುವತಿ ಸಾವು: ಈ ವರ್ಷದ ಮೊದಲ ಪ್ರಕರಣ

ಚಿಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಬುಧವಾರ ಮತ್ತೆ 6 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
Photo Credit : News Kannada

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ‌ ಬೊಪ್ಪನಮನೆ ಗ್ರಾಮದಲ್ಲಿ ಮಂಗನ ಕಾಯಿಲೆಯಿಂದ 18 ವರ್ಷದ ಯುವತಿ ಸಾವನ್ನಪ್ಪಿರುವ ಘಟನೆ  ನಡೆದಿದೆ.

ಬೊಪ್ಪನೆಮನೆ ಗ್ರಾಮದ ನಿವಾಸಿ ಅನನ್ಯ ಮೃತ ಯುವತಿ. ಈ ವರ್ಷ ಮಂಗನ ಕಾಯಿಲೆಗೆ  ಮೃತಪಟ್ಟ ಮೊದಲ ಪ್ರಕರಣವಾಗಿದೆ.

ಚಳಿ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೂರು ದಿನ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಈ ಮಂಗನ ಕಾಯಿಲೆಯನ್ನು ಕ್ಯಾಸನೂರು ಫಾರೆಸ್ಟ್​ ಕಾಯಿಲೆ ಎಂದು ಕೂಡ ಕರೆಯುತ್ತಾರೆ.

ತೀವ್ರ ಮೆದಳು ಜ್ವರ ಮತ್ತು ರಕ್ತ ಹೀನತೆಯಿಂದ ಯುವತಿ ಬಳಲುತ್ತಿದ್ದಳು. ಇದೊಂದು ಕೆಎಫ್​ಡಿಯಿಂದ ಮೃತ ಪಟ್ಟಿರುವುದು ವರದಿಯಿಂದ ಖಚಿತ ಆಗಬೇಕಿದೆ. ಈಗಾಗಲೇ ಎಲ್ಲ ರೀತಿಯಿಂದ ಆರೋಗ್ಯ ಇಲಾಖೆ ಮುಂಜಾಗೃತೆ ವಹಿಸಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು