ಬಾಂಬ್ ಬೆದರಿಕೆ ಪ್ರಕರಣವನ್ನು ಹಗುರವಾಗಿ ತೆಗೆದುಕೊಳ್ಳುವುದಿಲ್ಲ- ಮಧು ಬಂಗಾರಪ್ಪ

ಶಿವಮೊಗ್ಗ: ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ವಿಚಾರ ಹಗುರವಾಗಿ ತೆಗೆದುಕೊಳ್ಳಲು ಬರೋದಿಲ್ಲ.‌ ಯಾರು ಇದನ್ನು ಮಾಡಿದ್ದಾರೆ ಪತ್ತೆ ಹಚ್ಚುತ್ತೇವೆ ಎಂದು ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಸಾಗರದಲ್ಲಿ ಅವರು ಸುಧ್ದಿಗಾರರೊಂದಿಗೆ ಮಾತನಾಡಿ, ಶಾಲೆಗಳಿಗೆ ರಕ್ಷಣೆ ಕೊಡಲು ನಾವು ಮಾತನಾಡಿದ್ದೇವೆ. ಇದನ್ನು ಹಗುರವಾಗಿ ತೆಗೆದುಕೊಳ್ಳುವ ಮಾತಿಲ್ಲ. ಸುರಕ್ಷತಾ ದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ನಮ್ಮ ಮೇಲೆ ವಿಶ್ವಾಸ ಇಡಬೇಕು. ಯಾರು ಈ ಮೇಲ್ ಕಳಿಸಿದ್ದಾರೆ ಅವರನ್ನು ಬಿಡುವ ಪ್ರಶ್ನೆ ಇಲ್ಲ. ಪೋಷಕರು ಧೈರ್ಯವಾಗಿರಬೇಕು ಎಂದರು. ನನ್ನ ಇಲಾಖೆ ಬಗ್ಗೆ ನಾನು ಮುತುವರ್ಜಿ ವಹಿಸಿದ್ದೇನೆ. ಮಕ್ಕಳಿಗೆ ಶಾಲೆಗಳಿಗೆ ರಕ್ಷಣೆ ನೀಡುವುದು ನಮ್ಮ ಜವಾಬ್ದಾರಿ. ಡಿಸಿಎಂ ಅವರು ಸಹ ಶಾಲೆಗೆ ಭೇಟಿ ನೀಡಲಿದ್ದಾರೆ. ನಾನು ಸಹ ಸಂಜೆ ಬೆಂಗಳೂರಿಗೆ ಹೋಗುತ್ತೇನೆ. ಈಗಾಗಲೇ ಅಧಿಕಾರಿಗಳ ಜೊತೆ ಮಾಹಿತಿ ತಗೊಂಡಿದ್ದೇನೆ ಎಂದರು.

ಬಾಂಬ್ ಬೆದರಿಕೆ ಪ್ರಕರಣದ ಕುರಿತು ಗೃಹ ಸಚಿವ ಡಾ. ಜಿ ಪರಮೇಶ್ವರ್ ಬೆಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಂಡರು. ಬೆದರಿಕೆ ಕರೆ ಬಂದಿರುವ ಎಲ್ಲ ಕಡೆ ಸಿಐಡಿ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಎಲ್ಲ ಸ್ವಾಡ್‌ಗಳನ್ನು ಕಳುಹಿಸಿ ತಪಾಸಣೆ ನಡೆಸಬೇಕು, ಶಾಲಾ ಸುತ್ತಮುತ್ತ ಕಟ್ಟೆಚ್ಚರಿಕೆ ವಹಿಸುವಂತೆ ನಿರ್ದೇಶಿಸಿದರು. ಪೊಲೀಸ್ ಆಯುಕ್ತರಿಗೆ ಕರೆ ಮಾಡಿ ಮಾಹಿತಿ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಗೃಹ ಸಚಿವರು, ಬೆದರಿಕೆ ಬಂದಿರುವ 15 ಶಾಲೆಗಳಲ್ಲಿಯೂ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸಲಿದ್ದಾರೆ ಎಂದರು.

Gayathri SG

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

43 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

1 hour ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

1 hour ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago