ಶಿವಮೊಗ್ಗ: ಸಿದ್ದರಾಮಯ್ಯ ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು

ಶಿವಮೊಗ್ಗ, ಸೆ.29: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮಾದರಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ( ಆರ್ ಎಸ್ ಎಸ್ ) ನಿಷೇಧಿಸುವಂತೆ ಒತ್ತಾಯಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಗುರುವಾರ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ತಾಳ್ಮೆ ಕಳೆದುಕೊಂಡು ಹುಚ್ಚುಚ್ಚಾಗಿ ಮಾತನಾಡುತ್ತಿದ್ದಾರೆ. ಅವರು ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು” ಎಂದು ಯಡಿಯೂರಪ್ಪ ಹೇಳಿದರು.

“ದೇಶದ ಪ್ರಧಾನಿ ಆರ್ ಎಸ್ ಎಸ್ ನಿಂದ ಬಂದವರು, ರಾಷ್ಟ್ರಪತಿಗಳು ಆರ್ ಎಸ್ ಎಸ್ ನಿಂದ ಬಂದವರು ಮತ್ತು ನಾವೆಲ್ಲರೂ ಆರ್ ಎಸ್ ಎಸ್ ನಲ್ಲಿ ನಮ್ಮ ಬೇರುಗಳನ್ನು ಹೊಂದಿದ್ದೇವೆ. ಆರ್ ಎಸ್ ಎಸ್ ಬಗ್ಗೆ ಸಿದ್ದರಾಮಯ್ಯ ಆ ರೀತಿ ಮಾತನಾಡುವುದು ಸರಿಯಲ್ಲ’ ಎಂದು ಯಡಿಯೂರಪ್ಪ ಹೇಳಿದರು. ಪಿಎಫ್ಐನ ಬೆಳವಣಿಗೆಯು ಕಾಂಗ್ರೆಸ್ ಪಕ್ಷದ ಪಾಪದ ಕೃತ್ಯವಾಗಿದೆ ಎಂದು ಅವರು ಒತ್ತಿ ಹೇಳಿದರು.

ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಬಿಜೆಪಿ ಆರ್ ಎಸ್ ಎಸ್ ಸೃಷ್ಟಿಸಿದ ಅದೃಷ್ಟಹೀನ ಮಗು” ಎಂದು ಹೇಳಿದರು.

ತಮ್ಮ ಅಧಿಕಾರಾವಧಿಯಲ್ಲಿ ಪಿಎಫ್ಐ ವಿರುದ್ಧ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಯಡಿಯೂರಪ್ಪ ಅವರನ್ನು ಪ್ರಶ್ನಿಸಿದರು.

ಬೆಂಗಳೂರು ನಗರದಲ್ಲಿರುವ ಪಿಎಫ್ಐ ಮತ್ತು ಅದರ ಸಂಬಂಧಿತ ಸಂಘಟನೆಗಳ ಎಲ್ಲಾ ಕಚೇರಿಗಳನ್ನು ಮುಚ್ಚಲು ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಗುರುವಾರ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬೆಂಗಳೂರಿನ ಪಿಎಫ್ಐ ಕೇಂದ್ರ ಕಚೇರಿಯನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ. ಕರ್ನಾಟಕ ಪೊಲೀಸ್ ಇಲಾಖೆ ರಾಜ್ಯಾದ್ಯಂತ ಪಿಎಫ್ಐನ ಕಚೇರಿಗಳನ್ನು ಸೀಲ್ ಮಾಡಲು ಪ್ರಾರಂಭಿಸಿದೆ.

ಪಿಎಫ್ಐ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಕೇಂದ್ರಗಳಲ್ಲಿ ಒಂದಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಪೊಲೀಸರು 10 ಕ್ಕೂ ಹೆಚ್ಚು ಕಚೇರಿಗಳನ್ನು ವಶಪಡಿಸಿಕೊಂಡಿದ್ದಾರೆ.

Gayathri SG

Recent Posts

ಪ್ರಜ್ವಲ್ ನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ: ಪೋಸ್ಟರ್ ಅಂಟಿಸಿದ್ದ ಕಾರ್ಯಕರ್ತರು ವಶಕ್ಕೆ

ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್ ಅಂಟಿಸಿದ್ದ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ…

8 mins ago

‘ಕಣ್ತಪ್ಪಿನಿಂದ’ ಆದ ಅಚಾತುರ್ಯ: ವಿಷಾದ ವ್ಯಕ್ತಪಡಿಸಿದ ಸುವರ್ಣ ನ್ಯೂಸ್

ಭಾರತದ ಮುಸ್ಲಿಮರ ಜನಸಂಖ್ಯೆ ತೋರಿಸಲು ಸುವರ್ಣ ನ್ಯೂಸ್ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಿದ್ದು, ಭಾರೀ ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ…

15 mins ago

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಗಾಡ್ ಪ್ರಾಮಿಸ್’ ಚಿತ್ರದ ಮುಹೂರ್ತ

ಕಾಂತಾರ ಚಿತ್ರದಲ್ಲಿ ಸಣ್ಣ ಪಾತ್ರ ಮಾಡುವ ಮೂಲಕ ಗಮನ ಸೆಳೆದಿದ್ದ ಯುವ ನಟ ಸೂಚನ್ ಶೆಟ್ಟಿ ಅವರು ಹೊಸ ಸಾಹಸಕ್ಕೆ…

38 mins ago

ತೇರಿನ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು

ತೇರಿನ ಚಕ್ರಕ್ಕೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿರುವ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಸಂಭವಿಸಿದೆ.

50 mins ago

ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿ ಆಚರಣೆ

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಜಗಜ್ಯೋತಿ ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ತಹಸೀಲ್ದಾ‌ರ್ ಮಲ್ಲಿಕಾರ್ಜುನ ಹೆಗ್ಗಣ್ಣವರವರು…

1 hour ago

ಶ್ರೀನಿವಾಸ್ ಪ್ರಸಾದ್ ಗೆ ನುಡಿ ನಮನ ಸಲ್ಲಿಸಿ ಕಣ್ಣೀರಿಟ್ಟ ಬದನವಾಳು ಗ್ರಾಮಸ್ಥರು

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು…

1 hour ago