Ad

ಹಳ್ಳಕ್ಕೆ ಬಿದ್ದ ಸರ್ಕಾರಿ ಬಸ್​: ಪ್ರಯಾಣಿಕರಿಗೆ ಗಂಭೀರ ಗಾಯ

ಸರ್ಕಾರಿ ಬಸ್​ವೊಂದು ಹಳ್ಳಕ್ಕೆ ಬಿದ್ದ ಘಟನೆ ಮಂಡ್ಯದ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.

ಮಂಡ್ಯ: ಸರ್ಕಾರಿ ಬಸ್​ವೊಂದು ಹಳ್ಳಕ್ಕೆ ಬಿದ್ದ ಘಟನೆ ಮಂಡ್ಯದ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.

Ad
300x250 2

ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದು ಬೆಳಕಿಗೆ ಬಂದಿದೆ. ಬಸ್​ ಅಪಘಾತ ಕಂಡು ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ.

ಬಸ್​ನಲ್ಲಿ ಒಟ್ಟು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಕೆಲವು ಪ್ರಯಾಣಿಕರಿಗೆ ಗಂಭಿರ ಗಾಯವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad
Ad
Nk Channel Final 21 09 2023
Ad