ಮಂಡ್ಯ: ಮಂಡ್ಯ ತಾಲೂಕಿನ ದೊಡ್ಡ ಗರುಡನಹಳ್ಳಿಯ ಕಬ್ಬಿನಗದ್ದೆಯಲ್ಲಿ ಬೆಳ್ಳಂಬೆಳಗ್ಗೆ ಚಿರತೆ ಕಾಣಿಸಿಕೊಂಡಿದೆ. ಮೊಬೈಲ್ ನಲ್ಲಿ ಚಿರತೆ ಓಡಾಡುವ ದೃಶ್ಯಗಳನ್ನ ಸ್ಥಳೀಯರು ಸೆರೆ ಹಿಡಿದಿದ್ದಾರೆ.

ಗ್ರಾಮದ ಬಳಿ ಚಿರತೆ ಓಡಾಟದಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಯವರಲ್ಲಿ ಮನವಿ ಮಾಡಿದ್ದಾರೆ.