ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ಟಿಪ್ಪರ್ ಲಾರಿ ಹಾಗೂ ಇನ್ನೋವಾ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ನಡೆದಿದೆ.
ಮೃತ ಚಾಲಕನನ್ನು ಹುಣಸೂರು ಮೂಲದ ಚಂದ್ರಶೇಖರ್ ನದು ಗುರುತಿಸಲಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ಟಿಪ್ಪರ್ ಲಾರಿ ಹಾಗೂ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಡಿಕ್ಕಿಯ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಏಕಾಏಕಿ ಕಾರಿಗೆ ಹಬ್ಬಿದೆ. ಪರಿಣಾಮ ಕಾರಿನಿಂದ ಹೊರಬಾರಲಾಗದೇ ಚಾಲಕ ಚಂದ್ರಶೇಖರ್ ಸಜೀವ ದಹನವಾಗಿದ್ದಾರೆ. ಶ್ರೀರಂಗಪಟ್ಟಣ ಟೌನ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

