ಮಂಡ್ಯ: ಮಂಡ್ಯ ತಾಲೂಕಿನ ಹೊನಗನಹಳ್ಳಿ ಮಠ ಗ್ರಾಮದಲ್ಲಿ ಮಧ್ಯಾಹ್ನ ಮನೆ ಬಳಿ ಆಟವಾಡುತ್ತಿದ್ದ ವೇಳೆ ವಿಶ್ವೇಶ್ವರಯ್ಯ ನಾಲೆಯಲ್ಲಿ 4 ವರ್ಷದ ಮಗು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ.

ಕಳೆದ ದಿನದಿಂದ ಕೆಆರ್​ಎಸ್​ ಜಲಾಶಯದಿಂದ ನಾಲೆಗೆ ನೀರು ಹರಿಸಲಾಗುತ್ತಿದೆ. ಇನ್ನು ರಾಜು ಹಾಗೂ ಕಸ್ತೂರಿ ದಂಪತಿಯ ಪುತ್ರ ಸಬಿನ್(4), ಅಂಗನವಾಡಿಯಿಂದ ಬಂದು ಮನೆ ಬಳಿಯೇ ಆಟವಾಡುತ್ತಿದ್ದ. ಆದರೆ, ಮಧ್ಯಾಹ್ನ 2.30ರಿಂದ ನಾಪತ್ತೆಯಾಗಿದ್ದಾನೆ. ಕೂಡಲೇ ಪೋಷಕರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮನೆ ಪಕ್ಕದಲ್ಲೇ ಇರುವ ವಿಶ್ವೇಶ್ವರಯ್ಯ ನಾಲೆ ಬಳಿ ಸಬಿನ್ ಚಪ್ಪಲಿ ಪತ್ತೆಯಾಗಿದೆ.

ಇನ್ನು ಆಟವಾಡುತ್ತ ಹೋಗಿ ಆಯತಪ್ಪಿ ವಿಶ್ವೇಶ್ವರಯ್ಯ ನಾಲೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಗ್ರಾಮಸ್ಥರು, ಕುಟುಂಬ ಸದಸ್ಯರು ಸೇರಿಕೊಂಡು ಮಗು ಸಬಿನ್​ಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಮಗು ಪತ್ತೆಗಾಗಿ ನೀರು ನಿಲ್ಲಿಸುವಂತೆ ಮನವಿ ಮಾಡಿದರೂ ನೀರು ನಿಲ್ಲಿಸದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ತುಂಬಿ ಹರಿಯುತ್ತಿರುವ ವಿಸಿ ನಾಲೆಯಲ್ಲಿ ಮಗು ಕೊಚ್ಚಿಹೋಗಿರಬಹುದು ಎನ್ನಲಾಗುತ್ತಿದೆ. ಈ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.