ಮಂಡ್ಯ: ಮೂರು ಕೆಎಸ್ ಆರ್ ಟಿ ಸಿ ಬಸ್ ಗಳ ನಡುವೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು 30 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ನಡೆದಿದೆ.
10 ಜನ ಪ್ರಯಾಣಿಕರ ಸ್ಥಿತಿ ಗಂಭೀರ ಎಂದು ಹೇಳಲಾಗಿದೆ.ಮೊದಲು ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ನಿಂತಿದ್ದ ಬಸ್ ಗೆ ಮತ್ತೊಂದು ಬಸ್ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನ ಮಳವಳ್ಳಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗಂಭೀರ ಗಾಯಗೊಂಡವರು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಮಹಿಳೆ ಹಾಗೂ ಗಾಯಾಳುಗಳ ಮಾಹಿತಿಯನ್ನ ಪೊಲೀಸರು ಕಲೆ ಹಾಕುತ್ತಿದ್ದಾರೆ. ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

