Bengaluru 28°C
Ad

ದಾಸನಿಗೆ ಮತ್ತೆ ನಿರಾಸೆ : ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ

ರೇಣುಕಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ ಅವರಿಗೆ ಮತ್ತೆ ನಿರಾಸೆಯಾಗಿದೆ. ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಲಾಗಿದೆ. ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್​ ಪರ ವಕೀಲರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಬಳ್ಳಾರಿ :  ರೇಣುಕಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ ಅವರಿಗೆ ಮತ್ತೆ ನಿರಾಸೆಯಾಗಿದೆ. ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಲಾಗಿದೆ. ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್​ ಪರ ವಕೀಲರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತ್ಯವಾಗಿದೆ. ಚಾರ್ಜ್​ಶೀಟ್​ ಸಲ್ಲಿಕೆ ಆದ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಯಿತು. ಕೇಸ್​ಗೆ ಸಂಬಂಧಿಸಿದಂತೆ ಕೆಲವು ಅನುಮಾನಗಳು ಇದ್ದಿದ್ದರಿಂದ ದರ್ಶನ್ ಪರ ವಕೀಲರು ಬಳ್ಳಾರಿ ಜೈಲಿಗೆ ಭೇಟಿ ನೀಡಿ ಮಾತುಕಥೆ ನಡೆಸಿ ಬಂದಿದ್ದರು. ಈಗ ವಾದಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್ ಪರ ವಕೀಲ ಸುನೀಲ್ ಅವರು ಕೋರಿದ್ದಾರೆ.

 

Ad
Ad
Nk Channel Final 21 09 2023