ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಕಾರು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಸೋಮವಾರ ಮಂಡ್ಯದಲ್ಲಿ ನಡೆದಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಒಬ್ಬರು ಮಾತ್ರ ಜೀವಸಹಿತ ಉಳಿದಿದ್ದಾರೆ.
ಮೃತರೆಲ್ಲರೂ ಹಾಲಹಳ್ಳಿ ಬಡಾವಣೆಯ ನಿವಾಸಿಗಳೆಂದು ತಿಳಿದುಬಂದಿದೆ. ವಿಸಿ ನಾಲೆಯಲ್ಲಿ ನೀರು ತುಂಬಿದ್ದ ಪರಿಣಾಮ ಈಜಿ ದಡ ಸೇರುವ ಪ್ರಯತ್ನವೂ ವ್ಯರ್ಥವಾಗಿ ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು ಕಾರ್ ಅನ್ನು ಹೊರತೆಗೆಯುವಲ್ಲಿ ನಿರತರಾಗಿದ್ದಾರೆ. ಮೃತದೇಹಗಳನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.