ಮಳವಳ್ಳಿ: ಆಕಸ್ಮಿಕವಾಗಿ ವಿದ್ಯುತ್ ತಗುಲಿ ರೈತರೊಬ್ಬರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಸಾಗ್ಯ ಗ್ರಾಮದಲ್ಲಿ ನಡೆದಿದೆ.
ರಮೇಶ್ (38) ಮೃತ ದುರ್ದೈವಿ. ಬೆಳಿಗ್ಗೆ ಎಂದಿನಂತೆ ತಮ್ಮ ಜಮೀನಿಗೆ ತೆರಳಿದ್ದ ವೇಳೆ ತೆಂಗಿನ ಗರಿಗಳನ್ನು ಜಮೀನಿನಿಂದ ಹೊರ ಹಾಕುವಾಗ 11 ಕೆವಿ ಸಾಮರ್ಥ್ಯದ ವಿದ್ಯುತ್ ತಂತಿ ಸಂಪರ್ಕ ಸಾಧಿಸಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

