Bengaluru 22°C
Ad

ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದ ಪ್ರಥಮ ಸ್ಥಾನಿಕ ವಿಧಿವಶ

Melkote

ಮಂಡ್ಯ: ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದ ಪ್ರಥಮ ಸ್ಥಾನಿಕ ಕರಗಂ ನಾರಾಯಣ ಅಯ್ಯಂಗಾರ್ (82) ಅವರು ಭಾನುವಾರ ವಿಧಿವಶರಾಗಿದ್ದಾರೆ. ಅಂತ್ಯಕ್ರಿಯೆ ಮುಗಿಯುವವರೆಗೂ ಮೇಲುಕೋಟೆ ದೇವಾಲಯ ಬಾಗಿಲು ಮುಚ್ಚಿರಲಿದ್ದು ಮಧ್ಯಾಹ್ನ 12 ಗಂಟೆ ನಂತರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಮಾಹಿತಿ ನೀಡಿದೆ.

Ad
300x250 2

ಕರಗಂ ನಾರಾಯಣ ಅಯ್ಯಂಗಾರ್ ಅವರು ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸಿ, ನಿವೃತ್ತಿ ಬಳಿಕ ದೇವಾಲಯದಲ್ಲಿ ಸ್ಥಾನಿಕರಾಗಿದ್ದರು. ಅಲ್ಲದೆ ರಾಜ್ಯ ಪ್ರಶಸ್ತಿಗೂ ಭಾಜನರಾಗಿದ್ದರು. ನಿವೃತ್ತಿ ಬಳಿಕ ಚೆಲುವನಾರಾಯಣನ ಸೇವೆಗಾಗಿಯೇ ತಮ್ಮ ಇಡೀ ಜೀವನ ಮುಡಿಪಾಗಿಟ್ಟಿದ್ದರು. ಶಿಕ್ಷಣ ಕ್ಷೇತ್ರದಲ್ಲೂ ದೀರ್ಘ ಅನುಪಮ ಸೇವೆ ಸಲ್ಲಿಸಿದ್ದರು. ದೇವಾಲಯದ ಸಾಂಪ್ರದಾಯಿಕ ಮರ್ಯಾದೆಯೊಡನೆ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಮೇಲುಕೋಟೆಯಲ್ಲಿ ಇಂದು ಕರಗಂ ನಾರಾಯಣ ಅಯ್ಯಂಗಾರ್ ಅಂತ್ಯಕ್ರಿಯೆ ನಡೆಯಲಿದೆ. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

 

 

Ad
Ad
Nk Channel Final 21 09 2023
Ad