ಮಂಡ್ಯ: ಮಂಡ್ಯದಲ್ಲಿ ಡಿಸೆಂಬರ್ 20 ರಿಂದ 22ರವರೆಗೆ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅಧಿಕೃತವಾಗಿ ಆಹ್ವಾನಿಸಿದರು.

ಬೆಳಗಾವಿಯ ಸುವರ್ಣಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ ಮಂಡ್ಯ ಜಿಲ್ಲಾಡಳಿತ ಹಾಗೂ ಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ, ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ, ವಿಧಾನಪರಿಷತ್ ಸದಸ್ಯ ಮಧು ಮಾದೇಗೌಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ ಇತರ ಗಣ್ಯರು ಇದೇ ವೇಳೆ ಹಾಜರಿದ್ದರು.