ಮಂಡ್ಯ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಡ್ಯದ ಹೊರವಲಯದ ಇಂಡುವಾಳು ಗ್ರಾಮದ ಬಳಿ ನಡೆದಿದೆ. ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ವೇ ನಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೈಸೂರಿನ ಸನತ್ ಎಂಬುವವರಿಗೆ ಸೇರಿದ ಕಾರು ಹೊತ್ತಿ ಉರಿದಿದೆ. ಬಟ್ಟೆ ವ್ಯಾಪಾರ ಮುಗಿಸಿ ಮೈಸೂರಿಗೆ ತೆರಳುತ್ತಿದ್ದ ಸನತ್ ಹಾಗೂ ಮತ್ತೊಬ್ಬರು ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಕೆಳಗಿಳಿದು  ಪ್ರಾಣಾಪಾಯದಿಂದ ಪಾರಾಗಿದ್ದಾರೆ.

KA05 ME 7634  ನೊಂದಣಿ ಕಾರು ಸಂಪೂರ್ಣ ಸುಟ್ಟು ಕರುಕಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿನಂದಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.