ಮಂಡ್ಯ: ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಡ್ಯ ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಸಂತೋಷ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಸುಮಾರು 8 ಕೆಜಿಗೂ ಅಧಿಕ ಗಾಂಜಾ ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿ ವಿರುದ್ಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ NDPS ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.