ಮಂಡ್ಯ : ಬುದ್ಧಿಮಾಂದ್ಯ ಯುವತಿ ಮೇಲೆ ಅಪ್ರಾಪ್ತ ಬಾಲಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಂಡ್ಯದ ನಾಗಮಂಗಲ ತಾಲೂಕಿನ ಕರಿಕ್ಯಾತನಹಳ್ಳಿಯಲ್ಲಿ ಈ ಘಟನೆ ನಡೆದಿದೆ.
19 ವರ್ಷದ ಬುದ್ಧಿಮಾಂದ್ಯ ಯುವತಿಯ ಮೇಲೆ ಅಪ್ರಾಪ್ತ ಅತ್ಯಾಚಾರಬೆಸಗಿದ್ದಾನೆ. ಯುವತಿಯ ಮನೆಯವರು ಬೇರೊಂದು ಗ್ರಾಮಕ್ಕೆ ಕೂಲಿಗೆ ಹೋಗಿದ್ದ ಸಮಯದಲ್ಲಿ ಅಪ್ರಾಪ್ತ ಯುವಕ ಈ ಕೃತ್ಯವೆಸಗಿದ್ದಾನೆ.
ಈ ವೇಳೆ ಮನೆಯ ಸಮೀಪ ಮೆಣಸಿನಕಾಯಿ ಕೇಳುವ ನೆಪದಲ್ಲಿ ಮನೆಗೆ ಬಂದ ಅಪ್ರಾಪ್ತ, ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಕಂಡು ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ವೇಳೆ ಪಕ್ಕದ ಮನೆಯ ಅಜ್ಜಿ ಈ ದೌರ್ಜನ್ಯ ತಡೆಯಲು ಯತ್ನಿಸಿದ್ದು ಬಾಲಕ ಆಕೆಯ ಮೇಲೂ ಹಲ್ಲೆ ನಡೆಸಿ ಜಾತಿನಿಂದನೆ ಮಾಡಿದ್ದಾನೆ ಎಂದು ಯುವತಿ ಪೋಷಕರು ಆರೋಪಿಸಿದ್ದಾರೆ.
ಈ ಕುರಿತು ಯುವತಿಯ ಪೋಷಕರು ದೂರು ನೀಡಿದ್ದು ಲೈಂಗಿಕ ದೌರ್ಜನ್ಯ ಮತ್ತು ಜಾತಿನಿಂದನೆ ಪ್ರಕರಣ ದಾಖಲಿಸಿ ಯುವಕನನ್ನು ಬಂಧಿಸಿದ್ದು, ಆ ಬಳಿಕ ಅಪ್ರಾಪ್ತನನ್ನು ಪೊಲೀಸರು ಜಡ್ಜ್ ಮುಂದೆ ಹಾಜರುಪಡಿಸಿ ಬಾಲಕರ ಮಂದಿರಕ್ಕೆ ಶಿಫ್ಟ್ ಮಾಡಿದ್ದಾರೆ.

